ಸಿಬಿಎಸ್‌ಇ, 12ನೇ ತರಗತಿ ಅಂಕ ನಿಗದಿ ಮಾನದಂಡಕ್ಕೆ ಸುಪ್ರೀಂ ಗಡುವು

ನವದೆಹಲಿ , ಜೂ.೩- ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ- ಸಿಬಿಎಸ್ ಇ ೧೨ನೇ ತರಗತಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲು ಅಳವಡಿಸಿಕೊಳ್ಳಬೇಕಾದ ವಸ್ತುನಿಷ್ಠ ಮಾನದಂಡಗಳ ಕುರಿತು ಎರಡು ವಾರಗಳಲ್ಲಿ ವಿವರ ಸಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗಡುವು ನೀಡಿದೆ.
ಇದೇ ಸಿಬಿಎಸ್ ಇ ಮತ್ತು ಐಸಿಎಸ್ ಇ ಯಾವ ಮಾನದಂಡ ಆದರಿಸುತ್ತೀರಾ ಎನ್ನುವುದನ್ನು ನ್ಯಾಯಾಲಯಕ್ಕೆ ತಿಳಿಸಿ ಎಂದು ನ್ಯಾಯಪೀಠ ಸೂಚನೆ ನೀಡಿದೆ
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಿಬಿಎಸ್ ಇ ೧೨ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವ ನಿರ್ಧಾರದಿಂದ “ಸಂತೋಷವಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಕುರಿತ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ.ಎಂ ಖಾನ್ವಿಲ್ ಕರ್ ಹಾಗು ದಿನೇಶ್ ಮಹೇಶ್ವರಿ ಅವರಿದ್ದ ಪೀಠ ಎರಡು ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ನ್ಯಾಯಾಲಯಕ್ಕೆ ವಿವರ ಸಲ್ಲಿಸಲು ನಾಲ್ಕು ವಾರಗಳ ಕಾಲ ಅವಕಾಶ ನೀಡಬೇಕು ಎನ್ನುವ ವಾದವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿ ಎರಡು ವಾರಗಳಲ್ಲಿ ಸಂಬಂಧ ಸಂಪೂರ್ಣ ಮಾಹಿತಿ ಒದಗಿಸುವಂತೆ ಸೂಚನೆ ನೀಡಿದೆ.
ಸಿಬಿಎಸ್ ಇ ಜೂನ್ ೧ ರಂದು ೧೨ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿತ್ತು, ನಂತರ ಐಸಿಎಸ್‌ಇ ತನ್ನ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ರದ್ದುಗೊಳಿಸಿತು.
ಪಿಯು ಪರೀಕ್ಷೆ ರದ್ದಿಗೆ ಮೊರೆ
ಸಿಬಿಎಸ್ ಸಿ ೧೨ ನೇ ತರಗತಿ ಪರೀಕ್ಷೆ ರದ್ದು ಬಳಿಕ ರಾಜ್ಯ ಮಂಡಳಿಗಳು ಸಹ ತಮ್ಮ ೧೨ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ಗೆ ಮುಂದೆ ಹೋಗಿವೆ.

ಸಿಬಿಎಸ್ ಇ ಮತ್ತು ಐಸಿಎಸ್ ಇಗೆ ಸಂಬಂಧಿಸಿದ ವಸ್ತುನಿಷ್ಠ ಮೌಲ್ಯಮಾಪನ ಮಾನದಂಡಸಮಸ್ಯೆಯನ್ನು ಪರಿಹರಿಸಿದ ನಂತರ, ೧ ಕೋಟಿಗೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡಿರುವ ೧೨ನೇ ತರಗತಿ ರಾಜ್ಯ ಮಂಡಳಿ ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ಪೀಠವು “ಸುಪ್ರೀಂ ಕೋರ್ಟ್ ಎಲ್ಲಾ ೧೨ನೇ ತರಗತಿ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸುತ್ತದೆ” ಎಂದು ಭರವಸೆ ನೀಡಿದರು. “ರಾಜ್ಯ ಮಂಡಳಿಯ ವಿಷಯವನ್ನು ಎತ್ತುವ ಅರ್ಜಿದಾರರು ಸ್ವಲ್ಪ ತಾಳ್ಮೆಯನ್ನು ಹೊಂದಿರಬೇಕು” ಎಂದು ಹೇಳಿದೆ.