ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು

ನವದೆಯಲಿ, ಜೂ.1- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಸಿಬಿಎಸ್ ಇ 12ನೇ ತರಗತಿಯ ಪರೀಕ್ಷೆಯನ್ನು ರದ್ದುಪಡಿಸುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಸಿಬಿಎಸ್ ಇ 12 ನೇ ತರಗತಿ ರದ್ದುಪಡಿಸಿರುವ ಬಗ್ಗೆ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ದಲ್ಲಿ ನಡೆದ ಸಭೆಯಲ್ಲಿ ನಡೆದ ಸಭೆಯಲ್ಲಿ ಸಿಬಿಎಸ್ ಇ ಪರೀಕ್ಷೆ ರದ್ದುಪಡಿಸಲಾಗಿದೆ.
ಈ ಸಭೆಯಲ್ಲಿ ಕೇಂದ್ರ ಸಚಿಚರಾದ ಅಮಿತ್ ಶಾ, ರಾಜನಾಥ್ ಸಿಂಗ್ , ಪಿಯೂಷ್ ಗೋಯಲ್ ಭಾಗವಹಿಸಿದ್ದರು.
ಕೆಲದಿನಗಳ ಹಿಂದೆ ಸಚಿವ ರಮೇಶ್ ಪೊಕ್ರಿಯಾಲ್ ನೇತೃತ್ವದಲ್ಲಿ ಎಲ್ಲ ರಾಜ್ಯಗಳ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಬಹುತೇಕ ರಾಜ್ಯಗಳು ಪರೀಕ್ಷೆಗೆ ಒಲವು ವ್ಯಕ್ತಪಡಿಸಿದ್ದವು.ಅಂತಿಮ ನಿರ್ಧಾರ ಮೇ 29ರೊಳಗೆ ತಿಳಿಸುವಂತೆ ಸೂಚಿಸಲಾಗಿತ್ತು. ಅದರಂತೆ ಪರೀಕ್ಷೆ ನಡೆಸುವ ಮುನ್ನ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರು.
ದೇಶದಲ್ಲಿ ಕೊರೊನಾ ಇಳಿಮುಖವಾಗಿದ್ದರು ಆತಂಕ ಇನ್ನೂ ಮುಂದುವರಿದಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ರದ್ದುಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು. ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಆತಂಕ ಬೇಡ ಎಂದು ಹೇಳಿದೆ.
ಇದರಿಂದಾಗಿ ಪರೀಕ್ಷೆ ನಡೆಸುವ ವಿಚಾರದಲ್ಲಿ ವಿದ್ಯಾರ್ಥಿಗಳು ಆತಂಕಗೊಂಡಿದ್ದರು. ಈಗ ಪರೀಕ್ಷೆ ರದ್ದುಪಡಿಸಿರುವುದರಿಂದ ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.