ಸಿಬಿಐ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಲು ಮಹಾ ಸರ್ಕಾರ ನಿರ್ಧಾರ

ಮುಂಬೈ, ಏ 6- ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಅನಿಲ್ ದೇಶ್ ಮುಖ್ ವಿರುದ್ದ ಸಿಬಿಐ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶ ಪ್ತಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.
ನೂತನ ಗೃಹ ಸಚಿವ ದಿಲೀಪ್ ವಾಲ್ಸೆಈ ವಿಷಯ ತಿಳಿಸಿದ್ದಾರೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ದೇಶ್ ಅವರ ಮೇಲೆ 100 ಕೋಟಿ ಹಫ್ತಾ ವಸೂಲಿಗೆ ಆದೇಶಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದರು.
ಈ ಬಗ್ಗೆ ತನಿಖೆ ನಡೆಸಿ 15 ದಿನದಲ್ಲಿ ವರದಿ ಸಲ್ಲಿಸುವಂತೆ ಬಾಂಬೆ‌ ಹೈಕೋರ್ಟ್ ಅದೇಶಿಸಿತ್ತು. ಈ ಹಿನ್ನೆಲೆಯಲ್ಲಿ ದೇಶ್ ಮುಖ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ರಾಜ್ಯಪಾಲ ‌ಭಗತ್ ಸಿಂಗ್ ಹೋಶಿಯಾರಿ ಗೃಹ ಖಾತೆಯನ್ನು ಎನ್ ಸಿಪಿ ನಾಯಕ ದಿಲೀಪ್ ವಾಲ್ದೆ ಅವರಿಗೆ ಹಸ್ತಾಂತರಿಸಿದ್ದರು.
ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಲ್ಸೆ ಪಾಟೀಲ್, ಈ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ರಾಜ್ಯ ಸರ್ಕಾರ ಎಲ್ಲ ನೆರವು ನೀಡಲಿದೆ. ಅಲ್ಲದೆ ಹೈಕೋರ್ಟ್‌ನ ಈ ಆದೇಶವನ್ನು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಅವರು ಹೇಳಿದರು.