ಸಿಮೆಂಟ್ ಮತ್ತು ಫೈಬರ್ ಶಿಲ್ಪ ಶಿಬಿರ ಉದ್ಘಾಟನೆ

ಕಲಬುರಗಿ,ನ.17:ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು ಹಾಗೂ ರಂಗಾಯಣ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ಸಿಮೆಂಟ್ ಮತ್ತು ಫೈಬರ್ ಶಿಲ್ಪ ಶಿಬಿರ”ದ ಉದ್ಘಾಟನಾ ಸಮಾರಂಭವನ್ನು ನ. 18 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿಯ ಸೇಡಂ-ಶಹಾಬಾದ ವರ್ತುಲ್ ರಸ್ತೆಯಲ್ಲಿರುವ ಡಾ. ಸಿದ್ದಯ್ಯ ಪುರಾಣಿಕ ಸುವರ್ಣ ಸಾಂಸ್ಕøತಿಕ ಸಮುಚ್ಚಯ ಆವರಣದಲ್ಲಿ ಏರ್ಪಡಿಸಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರು ಅವರು ಈ ಶಿಬಿರವನ್ನು ಉದ್ಘಾಟಿಸುವರು. ಬೆಂಗಳೂರಿನ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷ ವೀರಣ್ಣಾ ಮಾ. ಅರ್ಕಸಾಲಿ ಅಧ್ಯಕ್ಷತೆ ವಹಿಸುವರು. ಕಲಬುರಗಿ ರಂಗಾಯಣ ಅಧ್ಯಕ್ಷ ಪ್ರಭಾಕರ ಜೋಶಿ ಆಶಯ ನುಡಿ ಹೇಳುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಹೆಚ್.ಟಿ. ಪೋತೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ರಂಗಾಯಣ ಆವರಣದಲ್ಲಿ ನವೆಂಬರ್ 18 ರಿಂದ 2020ರ ಡಿಸೆಂಬರ್ 2ರವರೆಗೆ ಜರುಗಲಿರುವ ಈ ಶಿಬಿರದಲ್ಲಿ ವಿವಿಧ ಜಿಲ್ಲೆಗಳ ಹಿರಿಯ ಶಿಲ್ಪಿಗಳು ಹಾಗೂ ಸಹಾಯಕ ಶಿಲ್ಪ ಕಲಾವಿದರು ಸೇರಿದಂತೆ 30 ಜನ ಕಲಾವಿದರು ಭಾಗವಹಿಸಿ ತಮ್ಮ ಕಲಾಕೃತಿಗಳನ್ನು ರಚಿಸಲಿದ್ದಾರೆ.

ಸಮಾರೋಪ ಸಮಾರಂಭ: ಡಿಸೆಂಬರ್ 2 ರಂದು ಬೆಳಿಗ್ಗೆ 11.30 ಗಂಟೆಗೆ ಬೆಂಗಳೂರಿನ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷ ವೀರಣ್ಣಾ ಮಾ. ಅರ್ಕಸಾಲಿ ಅಧ್ಯಕ್ಷತೆಯಲ್ಲಿ ಈ ಶಿಬಿರದ ಸಮಾರೋಪ ಸಮಾರಂಭ ಜರುಗಲಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರು ಅವರು ಶಿಲ್ಪಗಳ ಲೋಕಾರ್ಪಣೆ ಮಾಡುವರು. ಕಲಬುರಗಿ ರಂಗಾಯಣ ಅಧ್ಯಕ್ಷ ಪ್ರಭಾಕರ ಜೋಶಿ ಅವರು ಸಮಾರೋಪ ನುಡಿ ಹೇಳುವರು. ಕಲಬುರಗಿ ಹಿರಿಯ ಚಿತ್ರಕಲಾವಿದ ಬಸವರಾಜ ಎಲ್.ಜಾನೆ, ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವಾನಂದ ಎಚ್. ಬಂಟನೂರ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.