ಸಿಯುಕೆಯಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಕುರಿತು ಒಂದು ವಾರದ ಜಾಗೃತಿ

ಕಲಬುರಗಿ:ಜ.29:“ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾಯ್ದೆಯು ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ನೈಸರ್ಗಿಕ ನ್ಯಾಯವನ್ನು ಒದಗಿಸುತ್ತದೆ” ಎಂದು ಹೈಕೋರ್ಟ್ ನ್ಯಾಯವಾದಿ ಶ್ರೀಮತಿ ಹೇಮಾ ಕುಲಕರ್ಣಿ ಹೇಳಿದರು.
ಇಂದು ಅವರು ಸಿಯುಕೆಯ ಆಂತರಿಕ ದೂರುಗಳ ಸಮಿತಿ (ಐಸಿಸಿ) ಆಯೋಜಿಸಿದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದ ಬಗ್ಗೆ ಜಾಗೃತಿ ಮೂಡಿಸುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡುತ್ತಿದ್ದರು. ಅವರು ಮುಂದುವರೆದು ಮಾತನಾಡಿ “ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿμÉೀಧ ಮತ್ತು ಪರಿಹಾರ) ಕಾಯಿದೆ 2013 ಶಿಕ್ಷಣ, ವಿಚಾರಣೆ, ಕೆಲಸದ ಸ್ಥಳವನ್ನು ಸುರಕ್ಷಿತವಾಗಿಸುವ ಮತ್ತು ಮಹಿಳಾ ಸ್ನೇಹಿಯಾಗಿ ಮಾಡುವಲ್ಲಿ ಉದ್ಯೋಗದಾತರ ಜವಾಬ್ದಾರಿ ಕುರಿತು ಮಾರ್ಗಸೂಚಿಗಳನ್ನು ಒದಗಿಸುತ್ತದೆ. ಈ ಕಾಯಿದೆಯ ಅಡಿಯಲ್ಲಿ ಉದ್ಯೋಗದಾತರು ಲೈಂಗಿಕ ಕಿರುಕುಳ ತಡೆಯಲು ಅಗತ್ಯ ಮಾಹಿತಿಯನ್ನು ಸಂಸ್ಥೆಯ ಪ್ರಮುಖ ಕೆಲಸದ ಸ್ಥಳಗಳಲ್ಲಿ ಪ್ರದರ್ಶಿಸಬೇಕು. ಇದರಿಂದ ಲೈಂಗಿಕ ಕಿರುಕುಳ ಕುರಿತು ಉದ್ಯೋಗಿಗಳಲ್ಲಿ ಜಾಗೃತಿ ಮೂಡಿಸುವ ಹಾಗು ಉದ್ಯೋಗಿಗಳಿಗೆ ಸುರಕ್ಷಿತ ಕೆಲಸದ ಸ್ಥಳವನ್ನು ಒದಗಿಸುವುದು ಜವಾಬ್ದಾರಿ ಉದ್ಯೋಗದಾತರದಾಗಿದೆ. ಲೈಂಗಿಕ ಕಿರುಕುಳ ಏನು ಎಂದು ಜನರಿಗೆ ಶಿಕ್ಷಣ ನೀಡಿದರೆ ಅವರು ಹಾಗೆ ಮಾಡುವುದನ್ನು ತಡೆಯುತ್ತಾರೆ. ಈ ಕಾಯಿದೆಯ ಮತ್ತೊಂದು ಪ್ರಮುಖ ಲಕ್ಷಣವೆಂದರೆ ಐಸಿಸಿ ರಚನೆ. ಅನೇಕ ಬಾರಿ ಮಹಿಳೆಯರು ತಮ್ಮ ನೋವನ್ನು ಸೂಕ್ತ ಅಧಿಕಾರಿಗಳಿಗೆ ತಿಳಿಸಲು ಮುಂದೆ ಬರುವುದಿಲ್ಲ ಮತ್ತು ಪೆÇಲೀಸ್ ಠಾಣೆಗೆ ಹೋಗಲು ಹಿಂಜರಿಯುತ್ತಾರೆ. ಸಹೋದ್ಯೋಗಿಗಳು ಐಐಸಿ ಸಮಿತಿಯ ಸದಸ್ಯರಾಗಿರುವುದರಿಂದ ಮಹಿಳೆಯರು ತಮ್ಮ ನೋವುಗಳನ್ನು ಹಂಚಿಕೊಳ್ಳಲು ಮತ್ತು ಅಪರಾಧಿಯನ್ನು ಬಹಿರಂಗಪಡಿಸಲು ನಿರ್ಭೀತ ವೇದಿಕೆಯನ್ನು ಒದಗಿಸುತ್ತದೆ” ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿದ್ದ ಮಾಜಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಡ್ಲೂರು ಸತ್ಯನಾರಾಯಣಾಚಾರ್ಯ ಮಾತನಾಡಿ, “ಲೈಂಗಿಕ ಕಿರುಕುಳವು ವೃತ್ತಿಪರ ಕ್ಷೇತ್ರದಲ್ಲಿ ಲಿಂಗ ತಾರತಮ್ಯದ ಒಂದು ರೂಪವಾಗಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರ ಘನತೆಯನ್ನು ಖಾತ್ರಿಪಡಿಸುವುದು ಸಂಸ್ಥೆ ಮತ್ತು ಅದರ ಮುಖ್ಯಸ್ಥರ ಜವಾಬ್ದಾರಿಯಾಗಿದೆ” ಎಂದು ಹೇಳಿದರು.
ಸಿಯುಕೆಯ ಕುಲಪತಿ, ಪೆÇ್ರ.ಬಟ್ಟು ಸತ್ಯನಾರಾಯಣ, ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ”ಐಸಿಸಿ ಕೇವಲ ಉದ್ಯೋಗಿಗಳಿಗೆ ಮಾತ್ರವಲ್ಲದೆ ವಿದ್ಯಾರ್ಥಿಗಳಿಗೂ ಅನ್ವಯಿಸುತ್ತದೆ. ನಮ್ಮ ವಿಶ್ವವಿದ್ಯಾಲಯವನ್ನು ಕೆಲಸ ಮಾಡಲು ಮತ್ತು ಅಧ್ಯಯನ ಮಾಡಲು ಅತ್ಯಂತ ಸುರಕ್ಷಿತ ಸ್ಥಳವನ್ನಾಗಿ ಮಾಡಲು ನಾವು ಈ ಕಾಯ್ದೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಮಹಿಳೆಯರಿಗೆ ಅಧಿಕಾರ ನೀಡುವ ಕಾನೂನುಗಳ ಬಗ್ಗೆ ನೀವೆಲ್ಲರೂ ತಿಳಿದಿರಬೇಕು ಮತ್ತು ಅವುಗಳನ್ನು ಬಳಸಲು ಭಯಪಡಬೇಡಿ. ಈ ಕಾನೂನುಗಳ ಹೊರತಾಗಿಯೂ ದೇಶಾದ್ಯಂತ ಅನೇಕ ಮಹಿಳಾ ದೌರ್ಜನ್ಯದ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ದೇಶವನ್ನು ಮಹಿಳೆಯರಿಗೆ ಸುರಕ್ಷಿತವಾಗಿಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಹಾತ್ಮಾ ಗಾಂಧೀಜಿ ಹೇಳಿದಂತೆ ಮಹಿಳೆಯರು ಮಧ್ಯರಾತ್ರಿಯಲ್ಲಿ ನಿರ್ಭಯವಾಗಿ ನಡೆದಾಡುವಂತಾದಾಗ ಮಾತ್ರ ನಿಜವಾಗಲು ನಮ್ಮ ಸಮಾಜವು ಮಹಿಳೆಯರಿಗೆ ಸುರಕ್ಷಿತವಾಗಿದೆ ಎಂದು ಹೇಳಬಹುದು. ಅದರಂತೆ ನಾವೆಲ್ಲ ನಡೆದುಕೊಳ್ಳಬೇಕು” ಎಂದು ಹೇಳಿದರು.
ಸಿಯುಕೆಯ ಐಸಿಸಿ ಸಮಿತಿಯ ಅಧ್ಯಕ್ಷೆ ಪೆÇ್ರ. ಸುನಿತಾ ಮಂಜನಬೈಲ್ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿ ”ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿμÉೀಧ ಮತ್ತು ಪರಿಹಾರ) ಕಾಯಿದೆ, 2013 ರ ಬಗ್ಗೆ ಜಾಗೃತಿ ಮೂಡಿಸಲು ಜನವರಿ 29 ರಿಂದ ಫೆಬ್ರವರಿ 2 ರವರೆಗೆ ಒಂದು ವಾರದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಉಪಕ್ರಮವು ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗಳಲ್ಲಿ ಗೌರವ, ತಿಳುವಳಿಕೆ ಮತ್ತು ಸಮಾನತೆಯ ಸಂಸ್ಕøತಿಯನ್ನು ಮೂಡಿಸಲಿದೆ. ಇದರ ಅಂಗವಾಗಿ ಐಸಿಸಿ ಸದಸ್ಯರಿಗೆ ತರಬೇತಿ ಕಾರ್ಯಗಾರ, ಆನ್‍ಲೈನ್ ಲೈಂಗಿಕ ಕಿರುಕುಳದ ಕುರಿತು ವಿಶೇಷ ಉಪನ್ಯಾಸ, ವಿದ್ಯಾರ್ಥಿಗಳಿಂದ ಪೆÇೀಸ್ಟರ್ ತಯಾರಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ” ಎಂದು ಹೇಳಿದರು.
ಪ್ರಭಾರಿ ರಿಜಿಸ್ಟ್ರಾರ್ ಪೆÇ್ರ.ಚನ್ನವೀರ ಆರ್ ಎಂ, ಸಿಯುಕೆ ಐಸಿಸಿ ಸದಸ್ಯರಾದ ಡಾ.ಬಸವರಾಜ ಎಂ.ಕುಬಕಡ್ಡಿ, ಡಾ.ರೇಣುಕಾ ಗುಬ್ಬೇವಾಡ, ಡಾ.ರೇμÁ್ಮ ನದಾಫ್, ಸಮರ್ಥಿನಿ ಶೆರಿಕಾರ, ಮಹಿಳಾ ಎನ್‍ಜಿಒ ಪ್ರತಿನಿಧಿ ಡಾ.ಪಲ್ಲವಿ ಪಾಟೀಲ್ ಉಪಸ್ಥಿತರಿದ್ದರು. ಡಾ.ಜಯದೇವಿ ಜಂಗಮಶೆಟ್ಟಿ ಮತ್ತು ಡಾ.ಸ್ವಪ್ನಿಲ್ ಚಾಪೇಕರ್ ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಹಾಡಿದರು.