ಸಿಯುಕೆಯಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ.ನ.29:ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಕಾರ್ಯವೈಖರಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ವಿಶ್ರಾಂತ ಸಿವಿಲ್ ನ್ಯಾಯಾಧೀಶ ಹಾಗೂ ಕರ್ನಾಟಕ ಹೈಕೋರ್ಟ್‍ನ ವಕೀಲರಾದ ಡಾ.ಸುಭಾಶ್ಚಂದ್ರ ರಾಥೋಡ್ ಹೇಳಿದರು. ಸಿಯುಕೆಯಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಅವರುಸಾಂವಿಧಾನಿಕ ನಿಬಂಧನೆಗಳ ಅನುμÁ್ಠನಕ್ಕೆ ನಾಗರಿಕರು ನೇರವಾಗಿ ಜವಾಬ್ದಾರರಾಗಿರದಿದ್ದರೂ ಸಹ ಪರೋಕ್ಷವಾಗಿ ಅವರು ಆಯ್ಕೆ ಮಾಡಿದ ಸರ್ಕಾರದ ಕಾರ್ಯಕ್ಕೆ ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರನಾಗಿರುತ್ತಾನೆ. ಒಂದುವೇಳೆ ಸರಕಾರವು ಸಂವಿಧಾನದ ಆಶಯದಂತೆ ಕೆಲಸ ಮಾಡದಿದ್ದರೆ, ಅದು ಸಂವಿಧಾನದ ಆಶಯದಂತೆ ನಡೆದುಕೊಳ್ಳುವಂತೆ ನಿರ್ದೇಶಿಸಲು ನ್ಯಾಯಾಲಯದ ಮೊರೆಹೊಗುವ ಹಕ್ಕು ಜನರಿಗಿದೆ. ನಮ್ಮ ಸಂವಿಧಾನದ ಪೀಠಿಕೆಯು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ಖಾತರಿಪಡಿಸುವ ಬಗ್ಗೆ ಮಾತನಾಡುತ್ತದೆ. ಆದರೆ ವಾಸ್ತವದಲ್ಲಿ ಅದು ವಿಭಿನ್ನವಾಗಿದೆ. ಸರ್ಕಾರದ ಸವಲತ್ತುಗಳನ್ನು ಪಡೆಯಲು ಅರ್ಹರಾಗಿರುವ ಅನೇಕ ಜನರಿಗೆ ಅವು ಸಿಗುವುದಿಲ್ಲ. ವಿದ್ಯಾವಂತರಿಗೆ ದೇಶದ ಬಗ್ಗೆ ಜವಾಬ್ದಾರಿ ಇದೆ ಎಂದು ಅವರು ಹೇಳಿದರು. ಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದ ಸಂಯೋಜಕ ಡಾ.ಬಸವರಾಜ ಕುಬಕಡ್ಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಭಾರಿ ಕುಲಸಚಿವ ಪೆÇ್ರ.ಚನ್ನವೀರ ಆರ್ ಎಂ, ಸಂವಿಧಾನದ ಪೀಠಿಕೆ ಓದಿದರು. ಡಾ.ಅನಂತ ಚಿಂಚೂರೆ ನಿರೂಪಿಸಿ ವಂದಿಸಿದರು. ಡಾ.ಜಯದೇವಿ ಜಂಗಮಶೆಟ್ಟಿ ಮತ್ತು ಡಾ.ಸ್ವಪ್ನಿಲ್ ಚಾಪೇಕರ್ ಅವರು ನಾಡಗೀತೆ ಮತ್ತು ರಾಷ್ಟ್ರಗೀತೆಯನ್ನು ಹಾಡಿದರು. ಎಲ್ಲಾ ನಿಕಾಯಗಳ ಡೀನ್‍ರು, ವಿಭಾಗಗಳ ಮುಖ್ಯಸ್ಥರು. ಸಂಯೋಜಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.