ಸಿಯುಕೆಯ ಕುಲಪತಿಗಳಾಗಿ ಒಂದು ವರ್ಷದ ಅಧಿಕಾರಾವಧಿ ಪೂರೈಸಿದ ಪ್ರೋ. ಬಟ್ಟು ಸತ್ಯನಾರಾಯಣ ಅವರಿಗೆ ಅಭಿನಂದನಾ ಕಾರ್ಯಕ್ರಮ

ಕಲಬುರಗಿ,ಜು.25:ಕುಲಪತಿಗಳಾಗಿ ಒಂದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ನಿಮಿತ್ತ ಪ್ರೋ. ಬಟ್ಟು ಸತ್ಯನಾರಾಯಣ ಅವರಿಗೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯವು ದಿನಾಂಕ 26.07.2022ರಂದು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ. ದಯಾನಂದ ಅಗಸರ ಅವರು ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೋ.ಬಸವರಾಜ ಪಿ ಡೋಣೂರ, ಶಾಸನಬದ್ಧ ಅಧಿಕಾರಿಗಳು, ಡೀನ್‍ಗಳು, ಮುಖ್ಯಸ್ಥರು, ಸಂಯೋಜಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.