ಸಿರಿಗೇರಿಯಲ್ಲಿ ನಾನಾ ಸಂಘಟನೆಗಳಿಂದ ಅಂಬೇಡ್ಕರ್ ಜಯಂತಿ ಆಚರಣೆ.


ಸಂಜೆವಾಣಿ ವಾರ್ತೆ
ಸಿರಿಗೇರಿ ಏ.15.  ಗ್ರಾಮದ ನಾನಾ ಕಡೆ ನಿನ್ನೆ ಅಂಬೇಡ್ಕರ್ ಜಯಂತಿಯ ಪ್ರಯುಕ್ತ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಾನಾ ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಗ್ರಾಮದ ಮುಖಂಡರು ಜಯಂತಿಯಲ್ಲಿ ಪಾಲ್ಗೊಂಡು, ಅಂಬೇಡ್ಕರ್ ಅವರ ಜೀವನದ ಆದರ್ಶಗಳನ್ನು ಮೆಲುಕು ಹಾಕಿದರು. ದಲಿತ ವಿದ್ಯಾರ್ಥಿ ಪರಿಷತ್ ಗ್ರಾಮ ಘಟಕ, ದಲಿತ ಸಂಘರ್ಷ ಸಮಿತಿ ಗ್ರಾಮ ಘಟಕ, ಡಾಕ್ಟರ್ ಬಾಬು ಜಗಜೀವನ್ ರಾಮ್ ಯುವಕ ಸಂಘ, ವಾಲ್ಮೀಕಿ ಯುವಕ ಸಂಘ, ಛಲವಾದಿ ಮಹಾಸಭಾ ಗ್ರಾಮ ಘಟಕ ಸೇರಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಾಲ್ಗೊಂಡು ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿದರು. ಇದೆ ವೇಳೆ ಸ್ಥಳೀಯ ಗ್ರಾಮಾಡಳಿತ, ಸರ್ಕಾರಿ ಕಚೇರಿಗಳು, ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.