ಸಿರಿಗೇರಿ ಮೆಣಸಿನಕಾಯಿ ಬೆಳೆ ಮಧ್ಯೆ ಗಾಂಜಾ ಪತ್ತೆ

ಬಳ್ಳಾರಿ ನ 06 : ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ಮೆಣಸಿನಕಾಯಿ ಬೆಳೆಯ ಮಧ್ಯೆ ಬೆಳೆದಿದ್ದ ಗಾಂಜಾ ಬೆಳೆಯನ್ನ ಅಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಮದ ಕೋಲಿ ಈರಣ್ಣ (48) ತನ್ನ ಹೊಲದಲ್ಲಿ ಗಾಂಜಾ ಬೆಳೆಸಿದ್ದ. ವಿಷಯ ತಿಳಿದ ಪೊಲೀಸರು ದಾಳಿ ನಡೆಸಿ 8 ಕೆ.ಜಿ. 300 ಗ್ರಾಂನಷ್ಟು ಗಾಂಜಾ ಗಿಡಗಳನ್ನ ವಶಪಡಿಸಿಕೊಂಡಿದ್ದಾರೆ. ಅಕ್ರಮ ಗಾಂಜಾ ಬೆಳೆದ ಆರೋಪದಡಿ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.