ಸಿರಿಧಾನ್ಯ ಕುರಿತು ವಿಚಾರ ಸಂಕೀರಣ

ಕಲಬುರಗಿ:ನ.29: ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಮಂಗಳವಾರದಂದು ವ್ಯವಹಾರ ಅಧ್ಯಯನ ನಿಕಾಯದ ವತಿಯಿಂದ ಆಯೋಜಿಸಿದ ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ ಅಂಗವಾಗಿ ಸಿರಿಧಾನ್ಯಗಳಿಂದ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಪ್ರಯೋಜನ ಕುರಿತು ವಿಚಾರ ಸಂಕಿರಣ ಹಾಗೂ ಸಿರಿಧಾನ್ಯಗಳ ಪ್ರದರ್ಶನವನ್ನು, ಕೃಷಿ ವಿಜ್ಞಾನ ಕೇಂದ್ರದ ಹಿರಿಯ ಕೃಷಿ ವಿಜ್ಞಾನಿ ಡಾ. ರಾಜು ತೆಗ್ಗಳ್ಳಿಯವರು ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಆಳಂದನ ರಕ್ಷಿತಾ ಲಾಡವಂತಿ, ಮಹಾಗಾಂವ್‍ನ ಮಲ್ಲಿನಾಥ ಹೆಮಾಡಿ, ಕಲಬುರಗಿಯ ಚನ್ನಬಸ್ಸಯ್ಯ ನಂದಿಕೋಲ ಹಾಗೂ ವಿವಿಯ ಸಮಕುಲಪತಿ ಡಾ. ವಿ. ಡಿ. ಮೈತ್ರಿ, ಕುಲಸಚಿವ ಡಾ. ಅನಿಲಕುಮಾರ ಬಿಡವೆ, ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ, ವ್ಯವಹಾರ ಅಧ್ಯಯನ ನಿಕಾಯದ ಡಾ. ಎಸ್. ಎಚ್. ಹೊನ್ನಳ್ಳಿ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.