ಸಿರಿಧಾನ್ಯ ಸಂಸ್ಕರಣಾ ಘಟಕಗಳನ್ನು ಹೆಚ್ಚು ಸ್ಥಾಪಿಸಲು ಪ್ರೋತ್ಸಾಹಿಸಿ

ಸಂಜೆವಾಣಿ ವಾರ್ತೆ
ದಾವಣಗೆರೆ,ಫೆ.೨೭; ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಆಯ್ಕೆಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಾಗೂ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ಜರುಗಿತು.ಈ ವೇಳೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಮಾತನಾಡಿ ವೈಯಕ್ತಿಕವಾಗಿ ಅತಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮಗಳ ಸ್ಥಾಪನೆಗೆ ಹಲವಾರು ಅರ್ಜಿ ಸಲ್ಲಿಸಿದ್ದು ಹೆಚ್ಚಾಗಿ ಸಿರಿಧಾನ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪನೆ ಮಾಡುವ ಮೂಲಕ ರಾಗಿ, ಜೋಳ, ನವಣೆ, ಸಾಮೆ, ಕೊರ್ಲೆ ಸೇರಿದಂತೆ ಇನ್ನಿತರೆ ಸಿರಿಧಾನ್ಯಗಳನ್ನು ಬಳಸುವ ಮೂಲಕ ಜನರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಇಂತಹ ಘಟಕಗಳ ಸ್ಥಾಪನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನರಿಗೆ ಈ ಧಾನ್ಯಗಳು ಸುಲಭವಾಗಿ ಸಿಗುವಂತೆ ನೋಡಿಕೊಳ್ಳಬೇಕೆಂದರು.ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.