ಸಿರಿವಾರ ಗ್ರಾಮದಲ್ಲಿ ಮತಗಟ್ಟೆ ಪರಿಚಯ ಕಾರ್ಯಕ್ರಮ


ಬಳ್ಳಾರಿ, ಮೇ 07- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ 10 ರಂದು ನಡೆಯುವ ಮತದಾನ ದಿನದಂದು ಎಲ್ಲರೂ ತಪ್ಪದೆ ಮತದಾನ ಮಾಡಬೇಕು. ಯಾರೂ ಮತದಾನದಿಂದ ಹೊರಗುಳಿಯಬಾರದು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಹೇಳಿದರು.
ಅವರು ಶನಿವಾರ, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿರಿವಾರ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದಡಿ ಮತಗಟ್ಟೆಗೆ ಭೇಟಿ ನೀಡಿ, ಧ್ವಜರೋಹಣ ನೆರವೇರಿಸಿ ಅವರು ಮಾತನಾಡಿದರು.
ಜಿಪಂ ಸಹಾಯಕ ಕಾರ್ಯದರ್ಶಿ ಪ್ರಮೋದ್.ಸಿ ಅವರು ಮತದಾನ ಜಾಗೃತಿ ಸಂಬಂಧಿಸಿದಂತೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು.
ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಐ ಬಾರೀಕಾರ್ ಅವರು ಮಾತನಾಡಿ, ಸಿರಿವಾರ ಗ್ರಾಮದ ಮತದಾರರಿಗೆ ಮತದಾನದ ಕುರಿತು ಅರಿವು ಮೂಡಿಸಿ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಮೇ-10 ರಂದು ಮತದಾನವನ್ನು ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಹಾಯಕ ನಿರ್ದೇಶಕ(ಆಡಳಿತ) ಬಸವರಾಜ್ ಹಿರೇಮಠ, ಪಂಚಾಯತ್ ರಾಜ್ ಸಹಾಯಕ ನಿದೇಶಕ ಮಹಮ್ಮದ್‍ಗೌಸ್ ರಿಸಲ್ದಾರ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆದಿಲಕ್ಷ್ಮೀ.ಎಂ, ತಾಲ್ಲೂಕು ಪಂಚಾಯತಿ ಸಿಬ್ಬಂದಿ ವರ್ಗ ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಗ್ರಾಮದ ಮತದಾರರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

One attachment • Scanned by Gmail