ಸಿರುಗುಪ್ಪ ತಾ. ಹೆಚ್ಚಿನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲವು – ಶಾಸಕ

ಸಿರುಗುಪ್ಪ,ಜ.1- ನಗರದ ಬಿಜೆಪಿ ಕಛೇರಿಯಲ್ಲಿ ಸುದ್ದಿಗಾರೊಂದಿಗೆ ಶಾಸಕ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿ ತಾಲೂಕಿನ 26 ಗ್ರಾಮ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದು, ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ 280 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ, ಸುಮಾರು ಶೇ.65% ರಷ್ಟು ಹೆಚ್ಚಿನ ಮತಗಳು ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗಳಿಸಿದ್ದು, 14 ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಚುಕಾಣಿ ಹಿಡಿಯಲಿದ್ದಾರೆ. ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಸುಮಾರು 20ಸ್ಥಾನಗಳಲ್ಲಿ 2ರಿಂದ 4 ಮತಗಳ ಅಂತರದಲ್ಲಿ ಸೋತಿದ್ದಾರೆ, ಆದರೂ ಇನ್ನೂ 4ರಿಂದ 5ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದರು.