ಸಿಲಿಂಡರ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಬ್ಯಾಡಗಿ,ಮಾ5: ಗೃಹಬಳಕೆ ಸಿಲಿಂಡರ್ ದರ ಏರಿಕೆಯನ್ನು ಖಂಡಿಸಿ ತಾಲೂಕಾ ಕಾಂಗ್ರೇಸ್ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಗಜೇಂದ್ರಗಡ- ಸೊರಬ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಸವರಾಜ ಶಿವಣ್ಣನವರ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ದೇಶದಲ್ಲಿ ಪೆÇಳ್ಳು ಭರವಸೆಗಳ ಜಾರಿ ಮಾಡುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿ ಲೂಟಿ ಮಾಡುತ್ತಿದೆ. ಗೃಹ ಬಳಕೆಯ ಸಿಲೇಂಡರ್ ದರವನ್ನು(ಅಡುಗೆ ಅನಿಲ) 50.ರೂಗಳನ್ನು ಏರಿಕೆ ಮಾಡಿ, ಗಾಯದ ಮೇಲೆ ಬರೆ ಎಳೆದಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಪರಿಣಾಮ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರವು ಪದೇಪದೇ ಸಿಲಿಂಡರ್ ದರವನ್ನು ಹೆಚ್ಚಿಸುತ್ತಾ ಬಡ ಹಾಗೂ ಮಧ್ಯಮ ವರ್ಗದ ಜನರ ಹೊಟ್ಟೆಯ ಮೇಲೆ ಬರೆ ಎಳೆಯುತ್ತಿದೆ ಎಂದು ಆರೋಪಿಸಿದರಲ್ಲದೇ, ಉಜ್ವಲ ಯೋಜನೆಯ ಹೆಸರಿನಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ನೀಡಿದ ಬಿಜೆಪಿ ಸರ್ಕಾರ ಸಾಂಪ್ರದಾಯಿಕ ಹಾಗೂ ವೆಚ್ಚರಹಿತ ಉರುವಲು ಬಳಕೆಯನ್ನು ನಾಶ ಮಾಡಿ ಕೋವಿಡ್ ಸಂಕಷ್ಟದ ಹೊರೆಯಿಂದ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ಜನರಿಗೆ ಪದೇಪದೇ ಬೆಲೆ ಏರಿಕೆಯ ಬರೆಯನ್ನು ಎಳೆಯುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಕಳೆದ ಒಂಬತ್ತು ವರ್ಷಗಳಿಂದ ಕಾಪೆರ್Çರೇಟ್ ಉದ್ದಿಮೆಗಳ 10.ಲಕ್ಷ ಕೋಟಿ ಸಾಲ ಮನ್ನಾ ಮಾಡಿ ಅಂಥವರ ಆರ್ಥಿಕ ಸ್ಥಿತಿಯನ್ನು ಹೆಚ್ಚಿಸಲು ಕಾರಣವಾಗಿದೆ. ದೇಶಾದ್ಯಂತ ಕೋವಿಡ್ ಸೋಂಕಿನಿಂದ ಕೋಟ್ಯಾಂತರ ಜನ ಉದ್ಯೋಗವನ್ನು ಕಳೆದುಕೊಂಡು ಬೀದಿಗೆ ಬಂದಾಗ ಅವರ ನೆರವಿಗೆ ಮುಂದಾಗಲಿಲ್ಲ. ದೇಶದಲ್ಲಿ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಪರಿಸ್ಥಿತಿಯಲ್ಲೂ ಕೂಡ ಮತ್ತೇ.. ಮತ್ತೇ.. ಸಿಲಿಂಡರ್ ದರವನ್ನು ಏರಿಕೆ ಮಾಡಿ ಬಡ ಜನರ ಹೊಟ್ಟೆಯ ಮೆಲೆ ಬರೆ ಎಳೆದಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಛೂರಿ, ಬೀರಪ್ಪ ಬಣಕಾರ, ಕೆಪಿಸಿಸಿ ಸದಸ್ಯ ಬಸವರಾಜ ಸವಣೂರು, ಪದವೀದರ ಕ್ಷೇತ್ರದ ಅಧ್ಯಕ್ಷ ಪ್ರಕಾಶ ಬನ್ನಿಹಟ್ಟಿ, ಪುರಸಭೆ ಸದಸ್ಯರಾದ ಮಹ್ಮದರಪಿಕ ಮುದಗಲ್ಲ, ರೇಷ್ಮಾ ಶೇಖ್ ನ್ಯಾಯವಾದಿಗಳಾದ ಶಿವಪ್ಪ ಅಂಬ್ಲಿ, ರಾಜೀವ ಶಿಗ್ಲಿ, ಒಬಿಸಿ ಜಿಲ್ಲಾಧ್ಯಕ್ಷ ನಿಂಗನಗೌಡ ಗೌಡ್ರ. ನಾಗರಾಜ ಆನ್ವೇರಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಂಕು ಬೆಂಚಳ್ಳಿ, ಎಸ್‍ಸಿ ಘಟಕದ ಅಧ್ಯಕ್ಷ ಜಗದೀಶ ದೊಡ್ಡಮನಿ, ಸುರೇಶಗೌಡ ಪಾಟೀಲ, ಖಾದರಸಾಬ ದೊಡ್ಡಮನಿ, ವೀರನಗೌಡ ಪೆÇೀಲಿಸಗೌಡ್ರ, ರಮೇಶ ಸುತ್ತಕೋಟಿ, ಮಾರುತಿ ಅಚ್ಚಿಗೇರಿ, ಕಾಂತೇಶ ಹಿತ್ತಲಮನಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.