ಸಿಲಿಂಡರ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಮಂಡ್ಯ: ಮಾ.03:- ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದ ಮೈಸೂರು ಬೆಂಗಳೂರು ಹೆದ್ದಾರಿ ರಸ್ತೆಯಲ್ಲಿ ಮಂಡ್ಯ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಹಿರಿಯ ಕಾಂಗ್ರೆಸ್ಸಿಗರು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಗ್ಯಾಸ್ ಸಿಲಿಂಡರ್ ದರ ಏರಿಕೆ ಖಂಡಿಸಿದರು.
ಮಂಡ್ಯ ನಗರದ ಜೆಸಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನೆಡೆಗಾಗಿ ವಿಜಯೋತ್ಸವ ಆಚರಿಸಿ, ಸಾರ್ವಜನಿಕರಿಗೆ ಸಿಹಿವಿತರಿಸಿ ಸಂಭ್ರಮಿಸಿದರು.
ಮಂಡ್ಯದ ಕರ್ನಾಟಕಸಂಘದ ಭವನದಲ್ಲಿ ಕೆ.ಕೆ.ರಾಧಾಕೃಷ್ಣ ಅಭಿಮಾನಿಗಳ ಬಳಗ, ರೋಟರಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಜನಮನ ಅಭಿಯಾನದ ಅಡಿಯಲ್ಲಿ ವಿಶೇಷಚೇತನರಿಗೆ ವೀಲ್‍ಚೇರ್ ವಿತರಣಾ ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಕೆ.ಕೆ.ರಾಧಾಕೃಷ್ಣ ವಿತರಿಸಿದರು.