
ರಾಯಚೂರು, ಮಾ.೦೫- ಗೃಹಬಳಕೆ ಸಿಲಿಂಡರ್ ಬೆಲೆ ಹೆಚ್ಚಳ ರದ್ದುಪಡಿಸಿ ಸಿಲಿಂಡರ್ ಬೆಲೆ ೬೦೦ ರೂ ಇಳಿಕೆ ಮಾಡುವಂತೆ ಸಾಮಾಜಿಕ ಕಾರ್ಯಕರ್ತ ಆನಂದ ಏಗನೂರು ಅವರು ಪತ್ರಿಕಾ ಹೇಳಿಕೆ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಜನಸಾಮಾನ್ಯರ ಸಂಕಷ್ಟವನ್ನು ಅರಿಯದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ ವಸ್ತುಗಳ ದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಬದಲಾಗಿ ಮತ್ತೆ ದರ ಏರಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಲಿಂಡರ್ ಬೆಲೆ ಏರಿಕೆಯಿಂದ ರೈತರು, ಬಡ, ಮದ್ಯಮ ವರ್ಗದ ಜನರ ಬದುಕಿನ ಮೇಲೆ ಪರಿಣಾಮ ಬೀರಿದೆ. ಸಾಮಾನ್ಯ ಜನರ ಬದುಕು ದುಸ್ತರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕಳೆದ ೨ ವರ್ಷಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಡುಗೆ ಅನಿಲ ದರವನ್ನು ರೂ.೫೦ ಹೆಚ್ಚಳ ಹಾಗೂ ವಾಣಿಜ್ಯ ಅನಿಲ ಬೆಲೆ ರೂ. ೩೫೦ ಏರಿಕೆಯಿಂದ ಜನ ಸಾಮಾನ್ಯರಿಗೆ ಮತ್ತು ಹೋಟೆಲ್ ನಡೆಸುವವರಿಗೆ ಹಾಗೂ ವಾಣಿಜ್ಯ ಬಳಕೆದಾರರಿಗೆ ಬಹಳ ತೊಂದರೆಯಾಗಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶಕ್ಕೆ ಅಚ್ಛೇದಿನ್-ಅಚ್ಛೇದಿನ್ ಆಯೆಗಾ ಎಂದು ಹೇಳಿ, ಕಪ್ಪು ಹಣವನ್ನು ತಂದು ಉಚಿತವಾಗಿ ಖಾತೆಯನ್ನು ತೆರೆದು ಪ್ರತಿ ಖಾತೆಗೆ ರೂ. ೧೦-೧೫ ಲಕ್ಷ ಜನಧನ ಖಾತೆಗೆ ಸುಳ್ಳು ಹೇಳಿಕೆಯಿಂದ ದೇಶದ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರೂ. ದಿನನಿತ್ಯದ ಗೃಹಬಳಕೆ ಸಿಲಿಂಡರ್ ಬೆಲೆ ಹೆಚ್ಚಳದಿಂದ ಬಡವರು, ಜನಸಾಮಾನ್ಯರು ಮೇಲೆ ಬರೆ ಎಲೆಯುತ್ತಿದ್ದಾರೆ. ಸಿಲಿಂಡರ್ ಬೆಲೆ ಕೂಡಲೇ ರದ್ದುಪಡಿಸಿ ೬೦೦ ರೂ ಇಳಿಕೆ ಮಾಡುವಂತೆ ಒತ್ತಾಯಿಸಿದರು.