ಸಿಲಿಂಡರ್ ಸೋರಿಕೆ ವಿದ್ಯಾರ್ಥಿ ಬಲಿ

ಬೆಳಗಾವಿ,ಅ.೨೯- ಸಿಲಿಂಡರ್ ಸೋರಿಕೆಯಾಗಿ ಹೊತ್ತಿಕೊಂಡ ಬೆಂಕಿಗೆ ಸಿಲುಕಿದ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದಲ್ಲಿ ನಡೆದಿದೆ. ನಾಗನೂರ ಗ್ರಾಮದ ನರ್ಸಿಂಗ್ ಓದುತ್ತಿದ್ದ ಶ್ರೀಧರ್ ಪ್ಯಾಟಿ (೧೯) ಮೃತ ವಿದ್ಯಾರ್ಥಿಯಾಗಿದ್ದಾನೆ. ಮನೆಯಲ್ಲಿ ನಿನ್ನೆ ಸಂಜೆ ವೇಳೆ ಟೀ ಮಾಡಲು ಹೋಗಿದ್ದಾಗ ಗ್ಯಾಸ್ ಆನ್ ಮಾಡಿ ಲೈಟರ್ ಹುಡುಕಿದ್ದಾನೆ. ಸ್ವಲ್ಪ ಸಮಯದ ಬಳಿಕ ಲೈಟರ್ ಸಿಕ್ಕಿದೆ. ಅಷ್ಟೊತ್ತಿಗಾಗಲೇ ಅಡುಗೆ ಮನೆ ತುಂಬಾ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದೆ. ಲೈಟರ್ ಹಚ್ಚುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಅದರಲ್ಲಿ ಸಿಲುಕಿ ಸ್ಥಳದಲ್ಲೇ ಶ್ರೀಧರ್ ಸಾವನ್ನಪ್ಪಿದ್ದಾನೆ.ಮೂಡಲಗಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ