ಸಿಲ್ಕ್ ಇಂಡಿಯಾ ಮೇಳಕ್ಕೆ ಚಾಲನೆ

ಹುಬ್ಬಳ್ಳಿ,ಮಾ10: ದೇಶಪಾಂಡೆನಗರದ ಗುಜರಾತ್ ಭವನದಲ್ಲಿ ಇಂದಿನಿಂದ ದಿ.19 ರವರೆಗೆ ನಡೆಯುವ ಯುಗಾದಿ ಹಬ್ಬದ ಅಂಗವಾಗಿ ಅಭಿವೃದ್ಧಿ ವತಿಯಿಂದ ಸಿಲ್ಕ್ ಇಂಡಿಯಾ ಮೇಳಕ್ಕೆ ಪಾಲಿಕೆ ಉಪಮೇಯರ್ ಉಮಾ ಮುಕುಂದ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 60 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಿರುವುದು ಖುಷಿಯ ಸಂಗತಿಯಾಗಿದೆ ಎಂದರು.
ಹುಬ್ಬಳ್ಳಿ ನಗರ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು 10 ದಿವಸಗಳ ಈ ವಿಶಿಷ್ಟ ಸಿಲ್ಕ್ ಇಂಡಿಯಾ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಉತ್ಪಾದಕರನ್ನು ಪೆÇ್ರೀತ್ಸಾಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಿಮ್ಸ್ ನ ಡಾ. ವೀಣಾ ಕಾರಟಗಿ, ಅಯೋಜಕರಾದ ಅಭಿನಂದನ ಪಿ, ಮಹೇಶ್ ಸೇರಿದಂತೆ ಉಪಸ್ಥಿತರಿದ್ದರು.