ಸಿವಿಲ್ ಪೊಲೀಸ್ ಕಾನ್ಸ್‍ಸ್ಟೇಬಲ್ ಹುದ್ದೆಗಳಿಗೆಲಿಖಿತ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಕಲಬುರಗಿ,ಡಿ.08:ಸಿವಿಲ್ ಪೊಲೀಸ್ ಕಾನ್ಸ್‍ಸ್ಟೇಬಲ್ (ಪುರುಷ ಮತ್ತು ಮಹಿಳಾ) (ತೃತೀಯ ಲಿಂಗ) ಹಾಗೂ ಸೇವಾ ನಿರತ ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಕಲಬುರಗಿ ನಗರದ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಇದೇ ಡಿಸೆಂಬರ್ 10 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಜರುಗಲಿದೆ ಎಂದು ಕಲಬುರಗಿ ನಗರ ಉಪ ಪೊಲೀಸ್ ಆಯುಕ್ತರು (ಕಾ&ಸು) ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಕನಿಕಾ ಸಿಕ್ರಿವಾಲ್ ಅವರು ತಿಳಿಸಿದ್ದಾರೆ.
ಈ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಈ ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಈ ಪರೀಕ್ಷಾ ಸಂದರ್ಭದಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳು, ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಗಳು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಬ್ಲ್ಯೂಟೂತ್ ಹಾಗೂ ವೈರ್‍ಲೆಸ್ ಸೆಟ್‍ಗಳು ಸೇರಿದಂತೆ ಮತ್ತಿತರ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಅದೇ ರೀತಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲಾ ಝೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ ಅವರು ಆದೇಶಿಸಿದ್ದಾರೆ.