ಸಿವಿಲ್ ಪೊಲೀಸ್ ಕಾನ್ಸ್‍ಸ್ಟೇಬಲ್ ನೇಮಕಾತಿಯ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ ಮುಂದೂಡಿಕೆ

ಕಲಬುರಗಿ,ನ.10:ಕಲಬುರಗಿಯ ಡಿಎಆರ್ ಹೆಡ್‍ಕ್ವಾರ್ಟರ್ಸ್ ಪೊಲೀಸ್ ಪರೇಡ್ ಮೈದಾನದಲ್ಲಿ ನ. 11, 12 ಹಾಗೂ 13 ನಿಗದಿಪಡಿಸಲಾಗಿದ್ದ ಸಿವಿಲ್ ಪೊಲೀಸ್ ಕಾನ್ಸ್‍ಸ್ಟೇಬಲ್ (ಪುರುಷ ಮತ್ತು ಮಹಿಳೆ) ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್‍ಟಿ) ಯನ್ನು ಆಡಳಿತಾತ್ಮಕ ಕಾರಣದಿಂದ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇದನ್ನು ಗಮನಿಸಬೇಕೆಂದು ಕಲಬುರಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.