ಸಿವಿಲ್ ಪೊಲೀಸ್ ಕಾನ್ಸ್‍ಸ್ಟೇಬಲ್ ನೇಮಕಾತಿಯ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ

ಕಲಬುರಗಿ,ನ.12:ಸಿವಿಲ್ ಪೊಲೀಸ್ ಕಾನ್ಸ್‍ಸ್ಟೇಬಲ್ (ಪುರುಷ ಮತ್ತು ಮಹಿಳೆ) ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್‍ಟಿ) ಯನ್ನು ನ. 19 ಹಾಗೂ 20 ರಂದು ಎರಡು ದಿನಗಳ ಕಾಲ ಕಲಬುರಗಿಯ ಡಿಎಆರ್ ಹೆಡ್‍ಕ್ವಾರ್ಟರ್ಸ್ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಹಾಜರಾತಿ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಲು ಬೆಂಗಳೂರಿನ ನೇಮಕಾತಿ ಹಾಗೂ ತರಬೇತಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ಈಗಾಗಲೇ ಸಂದೇಶವನ್ನು ರವಾನಿಸಲಾಗಿದೆ. ಅಭ್ಯರ್ಥಿಗಳು ಹಾಜರಾತಿ ಪತ್ರದಲ್ಲಿ ನೀಡಿರುವ ಸೂಚನೆಗಳನ್ವಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್.ಟಿ.) ಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.