
ಸಂಜೆವಾಣಿ ವಾರ್ತೆ
ಹೊಸಪೇಟೆ ಜ7: ಇಲ್ಲಿನ 29 ನೇ ವಾರ್ಡ್, ಗೋಕುಲ ನಗರದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ನಗರಸಭೆ ಅಧ್ಯಕ್ಷೆ ಸುಂಕಮ್ಮ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ನಗರಸಭೆಯ 15 ನೇ ಹಣಕಾಸು ಯೋಜನೆಯಲ್ಲಿ 25 ಲಕ್ಷ ರೂ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಲ್. ಎಸ್ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ ವಾರ್ಡಿನ ಸದಸ್ಯ ರಮೇಶ್ ಗುಪ್ತ, ವಾರ್ಡಿಬ ಮುಖಂಡರು ಯುವಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
.