ಸಿಸೋಡಿಯಾಗೆ ೧೪ ದಿನ ನ್ಯಾಯಾಂಗ ಬಂಧನ

ನವದೆಹಲಿ, ಮಾ. ೬- ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹಗರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಗುರಿಪಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಸಿಬಿಐ ಪರ ವಕೀಲರು ಮನವಿ ಮಾಡಿದರು.
ಈ ಮನವಿಗೆ ಸ್ಪಂದಿಸಿದ ನ್ಯಾಯಾಲಯ ಮಾ. ೨೦ ರವರೆಗೆ ಸಿಸೋಡಿಯಾ ಅವರನ್ನು ಮಾ. ೨೦ ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತು.