ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆ ಮಾ.21ಕ್ಕೆ ಮುಂದೂಡಿಕೆ

ನವದೆಹಲಿ,ಮಾ.10- ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಬಂಧನಕ್ಕೊಳಗಾಗಿರುವ ಎಎಪಿ ಹಿರಿಯ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಕೋರ್ಟ್ ಮಾರ್ಚ್ 21ಕ್ಕೆ ಮುಂದೂಡಿದೆ.
ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಿಸೋಡಿಯಾ ಅವರನ್ನು ನಿನ್ನೆ ತನ್ನ ವಶಕ್ಕೆ ಪಡೆದಿರುವ ಜಾರಿ ನಿರ್ದೇಶನಾಲಯ(ಇಡಿ), ಇಂದು ನಗರದ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 10 ದಿನಗಳ ಕಾಲ ತನ್ನ ಕಸ್ಟಡಿಗೆ ನೀಡುವಂತೆ ಕೋರಿದೆ.
2021-22ರ ದೆಹಲಿ ಮದ್ಯ ಅಥವಾ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ ನಂತರ ಈಗ ಇಡಿ ವಶಕ್ಕೆ ಪಡೆದಿದೆ.
ಜಾರಿ ನಿರ್ದೇಶನಾಲಯ ಮಾರ್ಚ್ 7 ರಂದು ಸಿಸೋಡಿಯಾ ಅವರನ್ನು ಮೊದಲ ಸುತ್ತಿನ ವಿಚಾರಣೆಗೆ ಒಳಪಡಿಸಿತ್ತು.