ಸಿಸೋಡಿಯಾ ಬಿಡುಗಡೆಗೆ ಸ್ಟಾಲಿನ್ ಆಗ್ರಹ

ಚೆನ್ನೈ,ಮಾ.೮- ದೆಹಲಿಯ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ , ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಎಂಟು ವಿರೋಧ ಪಕ್ಷಗಳು ಸಹಿ ಮಾಡಿದ ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಆರೋಪದ ಕುರಿತು ಪತ್ರಕ್ಕೆ ಕಾಂಗ್ರಸ್ ಸಹಿ ಹಾಕಿರಲಿಲ್ಲ. ಇದೀ ಮನೀಶ್ ಸಿಸೋಡಿಯಾ ಬಿಡುಗಡೆ ವಿಷಯದಲ್ಲಿ ಅಂತರ ಕಾಪಾಡಿಕೊಂಡಿದೆ.
ಎಂ.ಕೆ ಸ್ಟಾಲಿನ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ “ದೆಹಲಿಯ ಚುನಾಯಿತ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲಾಗಿದೆ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಸಾಂವಿಧಾನಿಕ ಖಾತರಿ ಕಸಿದುಕೊಳ್ಳುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅಪರಾಧ ನ್ಯಾಯ ವ್ಯವಸ್ಥೆಯ ಎಲ್ಲಾ ನಿಯಮಗಳನ್ನು ಆಡಳಿತಾರೂಢ ಪಕ್ಷದ ವೈಯಕ್ತಿಕ ತೃಪ್ತಿಗಾಗಿ ಕಾನೂನು ಪ್ರಕ್ರಿಯೆಗಳನ್ನು ಗಾಳಿಗೆ ತೂರಲಾಗಿದೆ,” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
“ಕಳೆದ ಒಂಬತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಕೇಂದ್ರದಲ್ಲಿ ವಿಶೇಷವಾಗಿ ರಾಜ್ಯಪಾಲರ ಕಚೇರಿಯಲ್ಲಿ ಪ್ರಧಾನ ತನಿಖಾ ಸಂಸ್ಥೆಗಳು ಮತ್ತು ಸಾಂವಿಧಾನಿಕ ಕಚೇರಿಗಳ ಉಳಿದಿರುವ ಖ್ಯಾತಿಯನ್ನು ಎತ್ತಿಹಿಡಿಯಲು ಮತ್ತು ತ ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಆಡಳಿತಾರೂಢ ಡಿಎಂಕೆಯ ನಿಲುವಿನಲ್ಲಿ ದೊಡ್ಡ ಬದಲಾವಣೆ ಸೂಚಿಸುತ್ತದೆ. ಮಾರ್ಚ್ ೧ ರಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸ್ಟಾಲಿನ್ ಜನ್ಮದಿನದ ಆಚರಣೆಗೆ ಎಎಪಿ ಆಹ್ವಾನ ನೀಡಿರಲಿಲ್ಲ.

“ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳನ್ನು ಗುರಿಯಾಗಿಸುತ್ತಿದೆ. ಬಿಜೆಪಿ ತನ್ನ ಮೈತ್ರಿ ಪಕ್ಷಗಳಂತೆ ಈ ಸಂಸ್ಥೆಗಳನ್ನು ಹೇಗೆ ಬಳಸಿಕೊಳ್ಳುತ್ತಿದೆ ಎಂಬುದನ್ನು ನೋಡಿದರೆ ಬೇಸರವಾಗುತ್ತದೆ. ಇದು ಪ್ರಜಾಪ್ರಭುತ್ವದ ವಿರುದ್ಧ ಮಾತ್ರವಲ್ಲದೆ ಕಾನೂನಿಗೆ ವಿರುದ್ಧವಾಗಿದೆ” ಎಅಮದು ಆರೋಪಸೀದ್ದಾರೆ.

ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಸಿಬಿಐ ಮತ್ತು ಇತರ ಸ್ವತಂತ್ರ ಸಂಸ್ಥೆಗಳನ್ನು ಬಳಸಿಕೊಳ್ಳುವ ತನ್ನ ಅಭ್ಯಾಸವನ್ನು ಬಿಡದಿದ್ದರೆ ಮುಂಬರುವ ೨೦೨೪ ರ ಚುನಾವಣೆಯಲ್ಲಿ ಜನರು ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.