ಸಿ.ಎಂ.ಮನೆ ಮುಂದೆ ರೈತ ಮಹಿಳೆಯರ ಪ್ರತಿಭಟನೆ

ಕೋಲಾರ,ಜೂ,೨೯- ಬಜೆಟ್‌ನಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾಗೆ ಆಗ್ರಹಿಸಿ ರೈತಸಂಘದ ಮುಖಂಡರು ಹಾಗೂ ಮಹಿಳಾ ಸಂಘಗಳ ಪದಾಧಿಕಾರಿಗಳು ಬೆಂಗಳೂರಿನ ಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸಿದ ವೇಳೆ ಸ್ಥಳಕ್ಕಾಗಮಿಸಿದ ಸಿಎಂ ಸಿದ್ದರಾಮಯ್ಯ ಮನವಿ ಸ್ವೀಕರಿಸಿ, ಸಹಕಾರ ಸಂಘಗಳ ಸಾಲಮನ್ನಾ ೧ ವರ್ಷ ಮಾಡಲಾಗುವುದಿಲ್ಲ. ಜತೆಗೆ ಸಾಲ ವಸೂಲಾತಿ ಮಾಡುವುದಿಲ್ಲ, ವರ್ಷದ ನಂತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದರು.


ರೈತಸಂಘದ ಕೋಲಾರ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ೫ ಗ್ಯಾರಂಟಿಗಳನ್ನು ಘೋಷಿಸಿರುವ ರಾಜ್ಯ ಸರಕಾರಕ್ಕೆ ೬ನೇ ಗ್ಯಾರಂಟಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಯೋಜನೆಯು ನುಂಗಲಾರದ ತುತ್ತಾಗಿದೆ. ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ವಿಚಾವಾಗಿ ಈಗಾಗಲೇ ಜಿಲ್ಲೆಯಾದ್ಯಂತ ಸಾಕಷ್ಟು ಹಳ್ಳಿಗಳಲ್ಲಿ ಸಾಲ ಮರುಪಾವತಿ ಮಾಡದೇ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೊಟ್ಟ ಮಾತಿನಂತೆ ಸಾಲಮನ್ನಾ ಮಾಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
ಮಹಿಳಾ ಸಂಘಗಳ ಪದಾಧಿಕಾರಿಗಳಾದ ಚೌಡಮ್ಮ, ಶೈಲಜಾ ಮಾತನಾಡಿ, ಮಾತನಾಡಿ ಮುಖ್ಯಮಂತ್ರಿಗಳ ಭಾವಚಿತ್ರಕ್ಕೆ ಹಾಲು ಮೊಸರು ಅರ್ಚನೆ ಮಾಡಿ ಸ್ತ್ರೀಶಕ್ತಿ ಸಾಲಮನ್ನಾ ಮಾಡುವಂತೆ ಆಗ್ರಹಿಸುತ್ತಿದ್ದೇವೆ. ಮುಖ್ಯಮಂತ್ರಿಗಳು ಅಂದು ಕೊಟ್ಟ ಮಾತಿನಂತೆಯೇ ನಡೆದುಕೊಂಡು ಇಂದು ಸಾಲಮನ್ನಾ ಮಾಡಲೇ ಬೇಕೆಂದು ಆಗ್ರಹಿಸಿದರು.
ನಾವು ಯಾವುದೇ ಕಾರಣಕ್ಕೂ ಸಾಲವನ್ನು ಮರುಪಾವತಿ ಮಾಡುವುದಿಲ್ಲ. ಈ ಬಗ್ಗೆ ಜಿಲ್ಲೆಯಾದ್ಯಂತ ಮಹಿಳೆಯರು ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಭೆ ನಡೆಸಿ, ಸರಕಾರದ ಮುಂದಿನ ಆದೇಶದವರೆಗೂ ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಿಬ್ಬಂದಿ ತೆರಳದಂತೆ ಸೂಚಿಸಿದ್ದಾರೆ.
ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ನರಸಿಂಹಯ್ಯ, ಯಾರಂಘಟ್ಟ ಗಿರೀಶ್, ನಾರಾಯಣಗೌಡ, ವೆಂಕಟಮ್ಮ, ರಾಧಮ್ಮ, ಶೋಭ, ಸುಗುಣ, ಸೌಮ್ಯ ಇದ್ದರು.