ಸಿ.ಜಿ. ಆಸ್ಪತ್ರೆಗೆ ಸಚಿವರ ಭೇಟಿ, ಪರಿಶೀಲನೆ

ದಾವಣಗೆರೆ.ಜ.14: ಕೋವಿಡ್-19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಎ ಬಸವರಾಜ್ ಅವರು ಗುರುವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ 2000 ಲೀ ಆಕ್ಸಿಜನ್ ಉತ್ಪಾದನ ಘಟಕ ಮತ್ತು 1000 ಲೀ ಆಕ್ಸಿಜನ್ ಉತ್ಪಾದನಾ ಘಟಕ, ಬೆಡ್‌ಗಳ ವ್ಯವಸ್ಥೆ ಬಗೆಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.