ಸಿ.ಡಿ.ಪ್ರಕರಣ:ಎಸ್.ಐ.ಟಿ.ಯಿಂದ ಸತ್ಯ ಹೊರ ಬರಲ್ಲ-ಸಿದ್ಧರಾಮಯ್ಯ

ಕಲಬುರಗಿ,ಮಾ.30-ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೆ. ಅದು ಇದೀಗ ನಡೆಯುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಐ.ಟಿ.ಯಿಂದ ಸತ್ಯ ಹೊರ ಬರಲ್ಲ ಅಂತ ಹೇಳಿದ್ದೆ ಚೀಪ್ ಜಸ್ಟೀಸ್ ಉಸ್ತುವಾರಿಯಲ್ಲಿ ತನಿಖೆ ನಡೆಸಲು ಆಗ್ರಹಿಸಲಾಗಿತ್ತು. ಇದೀಗ ಸಿ.ಡಿ. ಯುವತಿಯೇ ಚೀಪ್ ಜಸ್ಟೀಸ್ ಅವರಿಗೆ ಪತ್ರ ಬರೆದಿದ್ದಾಳೆ. ಮುಂದೇನಾಗುತ್ತೋ ನೋಡೋಣ ಎಂದರು.
ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಕಾರಿನ ಮೇಲೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಕೈಗೆ ತೆಗೆದುಕೊಳ್ಳಲು ಬರುವುದಿಲ್ಲ. ಅದು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದರು. ಸಿ.ಡಿ.ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ಅವರ ಹೆಸರು ಪ್ರಸ್ತಾಪ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಅವರೇ ಅದನ್ನು ಅಲ್ಲಗಳೆದಿದ್ದಾರೆ. ಅದರ ಬಗ್ಗೆ ಅವರನ್ನೇ ಕೇಳಿ ಎಂದು ಹೇಳಿದರು.
ಬಸವಕಲ್ಯಾಣದಲ್ಲಿ ಜೆಡಿಎಸ್ ಪಕ್ಷ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ಧರಾಮಯ್ಯ ಅವರು ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದರು.
ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿದಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳದೇ ಹೋದಲ್ಲಿ ಮುಂದೆ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಅಪಾಯವಿದೆ ಎಂದರು.