ಸಿ.ಡಿ.ಪ್ರಕರಣದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ:ಡಿಕೆಶಿ

ಕಲಬುರಗಿ,ಮಾ.30-ಸಿಡಿ ಪ್ರಕರಣದ ಬಗ್ಗೆ ಅಧಿವೇಶನದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಇದೀಗ ಅದರ ಬಗ್ಗೆ ಮಾತನಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಅವರವರ ಅನುಕೂಲಕ್ಕೆ ತಕ್ಕಂತೆ ಯಾರೂ ಏನು ಬೇಕಾದರು ಮಾಡಿಕೊಳ್ಳಲಿ ಸಿಡಿ ಪ್ರಕರಣದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.
ಬೆಳಗಾವಿಯಲ್ಲಿ ತಮ್ಮ ಮೇಲೆ ನಡೆದ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ರಾಜಕೀಯದಲ್ಲಿ ಇರೋರು. ಇದೆಲ್ಲಾ ಸಾಮಾನ್ಯ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಕ್ಷದ ಕಾರ್ಯಕರ್ತರು ಶಾಂತಿಯಿಂದ ಇರಬೇಕು, ರಾಜಕೀಯ ಜೀವನದಲ್ಲಿ ಎಲ್ಲವವನ್ನು ಸ್ವೀಕರಿಸಬೇಕು ಎಂದು ಹೇಳಿದರು.
ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲಿದೆ ಎಂದು ಅವರು, ಬಿಜೆಪಿ ವೈಫಲ್ಯಗಳಿಂದ ಕಾಂಗ್ರೆಸ್ ಗೆಲುವು ಸುಲಭವಾಗಲಿದೆ. ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರದಲ್ಲಿ ವಿಫಲವಾಗಿದೆ. ಜನರೇ ಬೀದಿಗಿಳಿದು ಹೋರಾಟ ಮಾಡುವಂತಾಗಿದೆ ಎಂದರು.