ಸಿ.ಡಿ ಪ್ರಕರಣ: ವೈಯಕ್ತಿಕ ವಿಷಯದಲ್ಲಿ ಪ್ರತಿಕ್ರಿಯೆ ನೀಡಲ್ಲ


ಮಂಗಳೂರು, ಮಾ.೩೧- ವಿವಾದಾತ್ಮಕ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ.ಸುಧಾಕರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ವೈಯುಕ್ತಿಕ ವಿಷಯದಲ್ಲಿ ಯಾವ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಹೇಳಿದರು.
ಉಡುಪಿ ಜಿಲ್ಲೆಯ ಎರಡು ದಿನಗಳ ಪ್ರವಾಸದ ನಿಮಿತ್ತ ನಿನ್ನೆ ಬೆಂಗಳೂರಿನಿಂದ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದ ವೇಳೆ ಪತ್ರಕರ್ತರು ಕೇಳಿದ ಸಿಡಿ ಪ್ರಕರಣದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಕರಿಸಿದರು. ರಮೇಶ್ ಜಾರಕಿಹೊಳಿ ಅವರ ಪ್ರಕರಣದ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು ಮಸ್ಕಿಯಲ್ಲಿ ಚುನಾವಣಾ ಪ್ರಚಾರ ಮಾಡಲು ಹೋಗುತ್ತೇನೆ ಎಂದು ಹೇಳಿದರು. ಸಿಎಂ ಯಡಿಯೂರಪ್ಪ ಅವರು ಕೊರೋನ ಮಾರ್ಗಸೂಚಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಜನರು ಪ್ರಾಥಮಿಕವಾಗಿ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಅವರು ಹೇಳಿದರು.