ಸಿ.ಯು.ಕೆ.ನಲ್ಲಿ ಗುಲಾಬಿ ಆಂದೋಲನ ಜಾಗೃತಿ ಜಾಥಾ

ಕಲಬುರಗಿ,ಜ.9: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಸಿ.ಯು.ಕೆ.ಕ್ಯಾಂಪಸ್‍ನಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ “ಗುಲಾಬಿ ಆಂದೋಲನ” ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿ.ವಿ. ಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯಣ ಅವರು ಜಾಗೃತಿ ಜಾಥಾಗೆ ಚಾಲನೆ ನೀಡಿದರು. ನಂತರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಾಮಾಜಿಕ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ತಂಬಾಕು ನಿμÉೀಧದ ವಿರುದ್ಧ ಕ್ಯಾಂಪಸ್‍ನಲ್ಲಿ ಘೋಷಣೆಗಳನ್ನು ಕೂಗುತ್ತಾ, ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿ ಸಮೂಹದಲ್ಲಿ ಜಾಗೃತಿ ಮೂಡಿಸಿದರು. ಬೀದಿ ಅಂಗಡಿಗಳ ಮಾಲೀಕರಿಗೆ ಗುಲಾಬಿ ಹೂವು ನೀಡಿ, ತಂಬಾಕು ತ್ಯಜಿಸಿ ಎಂದು ಕರೆ ನೀಡಿದ ಅವರು, ಅದರ ಸೇವೆನೆಯಿಂದ ಆರೋಗ್ಯದ ಮೇಲೆ ಆಗುವ ಹಾನಿಗಳು ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಪೆÇ್ರ. ಬಸವರಾಜ ಪಿ. ಡೋಣೂರ, ಡಾ.ಲಕ್ಷ್ಮಣ ಜಿ., ಡಾ. ಚಿತ್ಕಲಾ ವಿ., ಡಾ.ಶಿವಮೂರ್ತಿ ಎಸ್., ಜಿಲ್ಲಾ ತಂಬಾಕು ನಿಯಂತ್ರಣ ಕೊಶದ ಸೋಶಿಯಲ್ ವರ್ಕರ್ ಆರತಿ, ಧನಶ್ರೀ, ರವಿಚಂದ್ರ ಪೂಜಾರಿ ಸೇರಿದಂತೆ ವಿ.ವಿ. ಸಮಾಜ ಕಾರ್ಯ ವಿಭಾಗದ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.