ಸಂಜೆವಾಣಿ ವಾರ್ತೆ
ಯಲಬುರ್ಗಾ, ಏ.24: 63 ಯಲಬುರ್ಗಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಿ ವಿಜಿಲ್ ಆ್ಯಪ್, ವಾಟ್ಸಪ್ ಮೂಲಕ ಹಾಗೂ ಚುನಾವಣಾಧಿಕಾರಿಗಳ ಸಹಾಯವಾಣಿಗೆ ಬರುವ ದೂರುಗಳನ್ನು ಪೊಲೀಸ್ ಅಧಿಕಾರಿಗಳು, ಎಫ್ಎಸ್ ಟಿ, ವಿಎಸ್ ಟಿ ಹಾಗೂ ತಾಲೂಕು ನೋಡಲ್ ಅಧಿಕಾರಿಗಳು ತಕ್ಷಣವೇ ಅವುಗಳನ್ನು ಅತೀ ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾಧಿಕಾರಿ ಕಾವ್ಯರಾಣಿ ಕೆ.ವಿ ಅವರು ಸೂಚಿಸಿದರು.
ಯಲಬುರ್ಗಾ ಪಟ್ಟಣದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಭಾನುವಾರ ಮೇ 10 ರಂದು ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಎಫ್ಎಸ್ ಟಿ, ವಿಎಸ್ ಟಿ ಹಾಗೂ ತಾಲೂಕು ನೋಡಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಅವರು, ನಿಗದಿತ ವೇಳೆಯಲ್ಲಿ ಸಿ ವಿಸಿಲ್ ಆ್ಯಪ್ ನಲ್ಲಿ ಬರುವ ದೂರುಗಳನ್ನು ಕ್ರಮಬದ್ದವಾಗಿ ವಿಲೇವಾರಿ ಮಾಡಬೇಕು. ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ ಸಾರ್ವಜನಿಕರು 08543- 228224 ಗೆ ಕರೆಮಾಡುವ ದೂರುಗಳನ್ನು ತಕ್ಷಣವೇ ಪರಿಶೀಲಿಸಬೇಕು ಎಂದರು.
ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ವಿಠಲ್ ಚೌಗಲೆ, ಕುಕನೂರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ, ಶಿರಸ್ಥೆದಾರ ವಿಜಯಕುಮಾರ್, ಎಫ್ ಎಸ್ ಟಿ, ವಿಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು