ಸೀತಾರಾಮಂ ಅತ್ಯುತ್ತಮ ಚಿತ್ರರಾಣಿ, ಮೋಹಿತ್‌ಗೆ ನಟಿ, ನಟ ಗೌರವ

ಮಲ್ಬೋರ್ನ್,ಆ.೧೨-’ಸೀತಾ ರಾಮಂ’ ಅತ್ಯುತ್ತಮ ಚಿತ್ರ ಪ್ರಶಸ್ತಿ ಮತ್ತು ’ಆಗ್ರಾ ಅತ್ಯುತ್ತಮ ಇಂಡಿಯಾ ಚಿತ್ರ ಪ್ರಶಸ್ತಿ ಪಡೆದಿದೆ. ’ಮಿಸೆಸ್ ಚಟರ್ಜಿ ಗಿs ನಾರ್ವೆ ಚಿತ್ರದಲ್ಲಿನ ಅಭಿನಯಕ್ಕಾಗಿ ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ. ನಟ ಮೋಹಿತ್ ಅಗರ್ವಾಲ್ ಅವರು ’ಆಗ್ರಾ ಚಿತ್ರಕ್ಕಾಗಿ ಅತ್ಯುತ್ತಮ ಮಟ ಪ್ರಶಸ್ತಿ ಪಡೆದಿದ್ದಾರೆ.
ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ’ಪಠಾಣ್ ಚಿತ್ರ ಭಾರಿ ಗಳಿಕೆ ಮಾಡುವ ಮೂಲದ ದೇಶ ಮಾತ್ರವಲ್ಲದೇ, ವಿಶ್ವದೆಲ್ಲೆಡೆ ಸದ್ದು ಮಾಡಿತ್ತು. ಇದೀಗ ’ಪಠಾಣ್ ಪೀಪಲ್ಸ್ ಚಾಯ್ಸ್ ಪ್ರಶಸ್ತಿ ಗೆದ್ದುಕೊಂಡಿದೆ.
ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ೧೪ ನೇ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಪೀಪಲ್ಸ್ ಚಾಯ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಪಠಾಣ್ ಸಿನಿಮಾ ಜನವರಿ ೨೫ರಂದು ಬಿಡುಗಡೆ ಆಗಿ ಭಾರತೀಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿತ್ತು.
ಜಾನ್ ಅಬ್ರಹಾಂ, ದೀಪಿಕಾ ಪಡುಕೋಣೆ, ಡಿಂಪಲ್ ಕಪಾಡಿಯಾ ಮತ್ತು ಅಶುತೋಷ್ ರಾಣಾ ಸೇರಿದಂತೆ ಇತರರು ಸಿನಿಮಾದಲ್ಲಿ ನಟಿಸಿದ್ದಾರೆ. ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ ೧೦೫೦ ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಹಲವಾರು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ.
ಜೊತೆಗೆ, ಹಿಂದಿ ಚಿತ್ರರಂಗದ ಇತಿಹಾಸದಲ್ಲೇ ಇದು ವಿಶ್ವಾದ್ಯಂತ ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರವಾಗಿದೆ. ಶ್ರೀಧರ್ ರಾಘವನ್ ಚಿತ್ರಕಥೆ ಬರೆದಿರುವ ಸಿನಿಮಾವನ್ನು ಯಶ್ ರಾಜ್ ಫಿಲ್ಮ್ ನಿರ್ಮಿಸಿದೆ.
ಯಾರಿಗೆಲ್ಲಾ ಪ್ರಶಸ್ತಿ:
ಕಾರ್ತಿಕ್ ಆರ್ಯನ್ ಅವರಿಗೆ ’ದಿ ರೈಸಿಂಗ್ ಗ್ಲೋಬಲ್ ಸೂಪರ್‍ಸ್ಟಾರ್ ಆಫ್ ಇಂಡಿಯನ್ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ, ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಭಾರತೀಯ ಚಲನಚಿತ್ರೋದ್ಯಮದಲ್ಲಿ ೨೫ ವರ್ಷಗಳನ್ನು ಪೂರೈಸಿದ ಹಿನ್ನೆಲೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.