ಸುಂಕದಕಟ್ಟೆ ಗ್ರಾಮದಲ್ಲಿ ದಸರಾ ಆಚರಣೆ


ಹೊನ್ನಾಳಿ.ಅ.೨೭; ತಾಲೂಕು ಸುಂಕದಕಟ್ಟೆ ಗ್ರಾಮದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ಪಾರಂಪರಿಕ ಶ್ರದ್ಧಾ-ಭಕ್ತಿಗಳಿಂದ ನೆರವೇರಿತು.
ಸುಂಕದಕಟ್ಟೆ ಗ್ರಾಮದ ಹೊರವಲಯದಲ್ಲಿನ ಶ್ರೀ ರಾಮ ದೇವರ ದೇವಸ್ಥಾನಕ್ಕೆ ಶ್ರೀ ಮಂಜುನಾಥ ಸ್ವಾಮಿ, ಶ್ರೀ ನರಸಿಂಹ ಸ್ವಾಮಿ ದೇವರುಗಳು ತೆರಳಿದವು. ಅಲ್ಲಿ ಶ್ರೀ ರಾಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅಲ್ಲಿಯೇ ಸಮೀಪದಲ್ಲಿನ ಬನ್ನಿ ಗಿಡದಲ್ಲಿ ಬನ್ನಿ ಮುಡಿಯುವ ಕಾರ್ಯ ನಡೆಸಲಾಯಿತು. ಬಳಿಕ ಶ್ರೀ ಮಂಜುನಾಥ ಸ್ವಾಮಿ, ಶ್ರೀ ನರಸಿಂಹ ಸ್ವಾಮಿ ದೇವರುಗಳು ಮೆರವಣಿಗೆಯ ಮೂಲಕ ಸುಂಕದಕಟ್ಟೆ ಗ್ರಾಮಕ್ಕೆ ಆಗಮಿಸಿದವು. ಸುಂಕದಕಟ್ಟೆ ಗ್ರಾಮದ ಶ್ರೀ ಮಂಜುನಾಥ ಸ್ವಾಮಿ, ಶ್ರೀ ನರಸಿಂಹ ಸ್ವಾಮಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಪ್ರಧಾನ ಅರ್ಚಕ ಎಸ್. ರಾಜುಸ್ವಾಮಿ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.