ಸುಂಕೇಶ್ವರಹಾಳದಲ್ಲಿ ಪೌಷ್ಟಿಕ ಆಹಾರ ಶಿಬಿರ

ದೇವದುರ್ಗ.ಏ.೦೨-ತಾಲೂಕಿನ ಸುಂಕೇಶ್ವರಹಾಳ ಗ್ರಾಮದ ಅಂಗನವಾಡಿ ಕೇಂದ್ರ-೧ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಪೋಷಣಾ ಅಭಿಯಾನದಡಿ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ಸೋಮವಾರ ಜರುಗಿತು.
ಅಂಗನವಾಡಿ ಕಾರ್ಯಕರ್ತೆ ಶಿವಗಂಗಮ್ಮ ಮಾತನಾಡಿ, ಮಕ್ಕಳಲ್ಲಿ ಕಂಡುಬರುವ ಕಡಿಮೆ ತೂಕ, ಅಪೌಷ್ಟಿಕತೆ ಸೇರಿ ವಿವಿಧ ರೋಗಗಳ ಕುರಿತು ಜಾಗೃತಿ ಮೂಡಿಸಲು ಈ ಅಭಿಯಾನ ಆಯೋಜಿಸಲಾಗಿದೆ. ಗರ್ಭಿಣಿ, ತಾಯಂದಿರು ತಮ್ಮ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಿದೆ. ಮಹಿಳೆಯರು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಹೇಳಿದರು.
ಗರ್ಭಿಣಿಯರು, ತಾಯಂದಿರು ಹಾಗೂ ಅಪೌಷ್ಟಿಕ, ಕಡಿಮೆ ತೂಕದ ಮಕ್ಕಳ ಪೋಷಣೆಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ದೇವಮ್ಮ, ಗಂಗಮ್ಮ, ಬಸಮ್ಮ, ಶಿವಮ್ಮ, ಬಸವರಾಜ, ಸಲೀಂ ಇತರರಿದ್ದರು.