ಮಾಲೂರು,ಜೂ.೭- ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪ್ರದೇಶದಲ್ಲಿ ಹೆಚ್ಚು ಹೆಚ್ಚಾಗಿ ಗಿಡ ಮರಗಳನ್ನು ಬೆಳಸುವ ಮೂಲಕ ಸುಂದರ ಪರಿಸರವನ್ನು ನಿರ್ಮಾಣ ಮಾಡಬೇಕು ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯ ಮುಂಭಾಗ ಯೂನಿಕ್ ಶಾಲೆ, ಪೈ ಇಂಟರ್ ನ್ಯಾಷನಲ್, ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಯೊಬ್ಬ ನಾಗರೀಕರು ತಮ್ಮ ಸುತ್ತ ಮುತ್ತಲಿನ ಪ್ರದೇಶದಲ್ಲಿ ಹೆಚ್ಚು ಹೆಚ್ಚಾಗಿ ಗಿಡ ಮರಗಳನ್ನು ಬೆಳಸುವ ಮೂಲಕ ಸುಂದರ ಪರಿಸರವನ್ನು ನಿರ್ಮಾಣ ಮಾಡಬೇಕು. ಹೆಚ್ಚಾಗಿ ಗಿಡ ಮರಗಳನ್ನು ರಕ್ಷಣೆ ಮಾಡುವುದರಿಂದ ಶುದ್ಧವಾದ ಗಾಳಿಯನ್ನು ಪಡೆಯುವ ಮೂಲಕ ಉತ್ತಮ ಆರೋಗ್ಯವನ್ನು ಪಡೆಯಬಹುದು. ಹಾಗೂ ಉತ್ತಮ ಮಳೆಯನ್ನು ಪ್ರಕೃತಿ ನಮಗೆ ನೀಡುತ್ತಿದೆ. ಹಾಗೂ ಸಾಲು ಮರದ ತಿಮ್ಮಕ್ಕರವರು ಯಾವರೀತಿಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಗಿಡ ಮರಗಳನ್ನು ಪೂಷಣೆ ಮಾಡಿದರು ಎಂಬ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಅವರಂತೆ ಪ್ರತಿಯೊಬ್ಬ ವಿದ್ಯಾರ್ಥಿಯು ಪರಸರ ರಕ್ಷಣೆಗೆ ಮುಂದಾಗಬೇಕೆಂದರು.
ಇತ್ತೀಚಿನ ದಿನಗಳಲ್ಲಿ ಮನುಷ್ಯ ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡುವ ಮೂಲಕ ಪರಿಸರವನ್ನು ಕಲುಷಿತ ಮಾಡುತ್ತಿದ್ದಾನೆ. ಪರಿಸರವನ್ನು ಕಾಪಾಡುವುದು ನಮ್ಮಲ್ಲರ ಜವಾಬ್ದಾರಿಯಾಗಿದೆ. ಶಾಲಾ ಮಕ್ಕಳು ತಮ್ಮ ಮನೆ ಹಾಗೂ ಸುತ್ತ ಮುತ್ತಲಿ ಖಾಲಿ ಇರುವ ಜಾಗದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಿ ಉತ್ತಮ ಪರಿಸರವನ್ನು ನಿರ್ಮಾಣ ಮಾಡುವಂತೆ ಹೇಳಿದರು.
ಈ ಸಂದರ್ಭದಲ್ಲಿ ಯೂನೀಕ್ ವಿದ್ಯಾಸಂಸ್ಥೆಯ ಮಂಜುನಾಥ್, ಪುರಸಭಾ ಸದಸ್ಯರಾದ ಎಂ.ವಿ.ವೇಮನ, ಭಾರತಿ ಶಂಕರಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ರತ್ನಮ್ಮ, ಕೆ.ಪಿ.ಸಿಸಿ ಸದಸ್ಯ ಅಂಜನಿ ಸೋಮಣ್ಣ, ಪುರಸಭಾ ಮುಖ್ಯಾಧಿಕಾರಿ ಪ್ರದೀಪ್ ಕುಮಾರ್, ಪರಿಸರ ಅಭಿಯಂತರೆ ಶಾಲಿನಿ, ಆರೋಗ್ಯಾಧಿಕಾರಿ ಶ್ರೀನಿವಾಸ್, ಇನ್ನಿತರರು ಹಾಜರಿದ್ದರು.