ಸುಗಮವಾಗಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಸಲು ಸಲಹೆ

ಚಿತ್ರದುರ್ಗ,ಸೆ.24; ಜಿಲ್ಲೆಯಲ್ಲಿ ಸೆಪ್ಟೆಂಬರ್ 27 ಮತ್ತು 29ರಂದು ನಡೆಯುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯನ್ನು ಯಾವುದೇ ತೊಂದರೆಯಾಗದAತೆ ಸುಗಮವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಪ್ರತಿ ವರ್ಷವು ಯಾವುದೇ ತೊಂದರೆಯಾಗದAತೆ ಪರೀಕ್ಷೆಗಳನ್ನು ನಡೆಸಿಕೊಂಡು ಬರುತ್ತಿದ್ದೀರಿ ಅದೇ ರೀತಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯನ್ನು ಸಹ ಯಶಸ್ವಿಯಾಗಿ ನಡೆಸಬೇಕು ಎಂದು ಹೇಳಿದರು. ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸೋಂಕು ದೃಢಪಟ್ಟ ಪ್ರಕರಣಗಳು ಕಂಡುಬAದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ವ್ಯವಸ್ಥೆ ಮಾಡಿ, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.ಪರೀಕ್ಷೆ ನಡೆಯುವ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು. ಪರೀಕ್ಷಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಬೇಕು ಎಂದು ತಿಳಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ನೊಂದಾಯಿಸಿ ಪರೀಕ್ಷೆಗೆ ಹಾಜರಾಗದೇ ಇರುವಂತಹ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಸುತ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಒಟ್ಟು 416 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.ಜಿಲ್ಲೆಯಲ್ಲಿ ಐದು ಪರೀಕ್ಷಾ ಕೇಂದ್ರಗಳು: ಜಿಲ್ಲೆಯಲ್ಲಿ 416 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆಯನ್ನು ನಾಲ್ಕು ಸರ್ಕಾರಿ ಶಾಲೆಗಳಲ್ಲಿ ಹಾಗೂ ಒಂದು ಖಾಸಗಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕು ಸೇರಿ ಒಂದು ಪರೀಕ್ಷಾ ಕೇಂದ್ರದಲ್ಲಿ 66 ವಿದ್ಯಾರ್ಥಿಗಳು, ಚಿತ್ರದುರ್ಗ ತಾಲ್ಲೂಕಿನ ಡಾನ್ ಬಾಸ್ಕೋ ಖಾಸಗಿ ಶಾಲೆಯಲ್ಲಿ ಮತ್ತು ಹೊಳಲ್ಕೆರೆ ತಾಲ್ಲೂಕಿನ ಒಂದು ಕೇಂದ್ರದಲ್ಲಿ 159 ವಿದ್ಯಾರ್ಥಿಗಳು, ಹಿರಿಯೂರು ತಾಲ್ಲೂಕಿನ ಒಂದು ಕೇಂದ್ರದಲ್ಲಿ 99 ವಿದ್ಯಾರ್ಥಿಗಳು, ಹೊಸದುರ್ಗ ತಾಲ್ಲೂಕಿನ ಒಂದು ಕೇಂದ್ರದಲ್ಲಿ 92 ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 416 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಹಾಗೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಮನವಿ ಮಾಡಿದರು.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ಸರ್ಕಲ್ ಇನ್‌ಸ್ಪೆಕ್ಟರ್ ಕಿರಣ್, ಜಿಲ್ಲಾ ಖಜಾನೆಯ ಉಪನಿರ್ದೇಶಕ ರಾಜಣ್ಣ, ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಸಿ. ವಿಜಯ್‌ಕುಮಾರ್, ವಿಷಯ ಪರಿವೀಕ್ಷಕ ಶಿವಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಈಶ್ವರಪ್ಪ, ಕೆ.ಸುರೇಶ್, ನಾಗಭೂಷಣ್, ಎಲ್. ಜಯಪ್ಪ, ಸಿ.ಎಂ. ತಿಪ್ಪೇಸ್ವಾಮಿ, ಯುವರಾಜನಾಯ್ಕ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.