
ದಾವಣಗೆರೆ ಮಾ. ೯; ಇಂದಿನಿಂದ ಪ್ರಾರಂಭವಾಗಿರುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇಂದು ಕನ್ನಡ ಹಾಗೂ ಸಂಸ್ಕೃತಿಯ ವಿಷಯ ಕುರಿತು ಪರೀಕ್ಷೆ ಜರುಗಿತು.ದಾವಣಗೆರೆ ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ 20445 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.ಇಂದು ಬೆಳಗ್ಗೆ ನಗರದ ಮೋತಿ ವೀರಪ್ಪ ಕಾಲೇಜು, ಸೀತಮ್ಮ ಕಾಲೇಜಿಗೆ ಜಿಲ್ಲಾಧಿಕಾರಿ ಹಾಗೂ ಡಿಡಿಪಿಯು ಭೇಟಿ ನೀಡಿದ್ದರು.ಈ ವೇಳೆ ಮಾತನಾಡಿದ ಡಿಡಿಪಿಯು ಶಿವರಾಜ್ ದಾವಣಗೆರೆ ಜಿಲ್ಲೆಯಲ್ಲಿ ಇಂದು ನಡೆದ ಪರೀಕ್ಷೆಯಲ್ಲಿ ಯಾವುದೇ ಅವಘಡಗಳು ಜರುಗಿಲ್ಲ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದಿದ್ದಾರೆ ಎಂದರು.
ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಕೊಠಡಿ ಮೇಲ್ವೆಚಾರ ಸಿಬ್ಬಂದಿಗಳು ಮೊಬೈಲ್ ಫೋನ್ ಇತರೆ ವಿದ್ಯುನ್ಮಾನ ಆಧುನಿಕ ಉಪಕರಣಗಳ ಬಳಕೆ ನಿಷೇಧಿಸಲಾಗಿತ್ತು. ಕೊಠಡಿ ವಿದ್ಯುನ್ಮಾನ ಉಪಕರಣಗಳಿಗೆ ಅವಕಾಶ ಇರಲಿಲ್ಲ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರು. ಹಾಗೂ ಪರೀಕ್ಷ ಕೇಂದ್ರ ಸುತ್ತಲು ಸೆಕ್ಷನ್ 144 ರನ್ವಯ ನಿಷೇಧಜ್ಞೆ ಘೋಷಿಸಲಾಗಿತ್ತು. ಜಿಲ್ಲೆಯ ದಾವಣಗೆರೆ ತಾಲ್ಲೂಕಿನಲ್ಲಿ 17 , ಹರಿಹರ ತಾಲ್ಲೂಕಿನಲ್ಲಿ 04, ಜಗಳೂರು ತಾಲ್ಲೂಕಿನಲ್ಲಿ 03, ಚನ್ನಗಿರಿ ತಾಲ್ಲೂಕಿನಲ್ಲಿ 04, ಹೊನ್ನಾಳಿ ತಾಲ್ಲೂಕಿನಲ್ಲಿ 03 ಕೇಂದ್ರಗಳು ಒಳಗೊಂಡಂತೆ ಒಟ್ಟಾರೆ 31 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.20445 ವಿದ್ಯಾರ್ಥಿಗಳು ನೊಂದಣಿಯಾಗಿದ್ದು ಇದರಲ್ಲಿ 17928 ಹೊಸ ವಿದ್ಯಾರ್ಥಿಗಳು, 2159 ಪುನರಾವರ್ತಿತ ವಿದ್ಯಾರ್ಥಿಗಳು, 358 ಖಾಸಗೀ ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟಾರೆಯಾಗಿ ಜಿಲ್ಲೆಯ 20445 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ನೊಂದಾಯಿಸಿಕೊಂಡಿದ್ದಾರೆ.