ಸುಗಮ ಪರೀಕ್ಷೆಗಾಗಿ ಅಗತ್ಯದ ಕ್ರಮಕ್ಕೆ ಸೂಚನೆ

ಗದಗ,ಆ6: ಕರ್ನಾಟಕ ವಿಧ್ಯುತ ಪ್ರಸರಣ ನಿಗಮ ನಿಯಮಿತ ಕಿರಿಯ ಸಹಾಯಕರ ನೇಮಕಾತಿಗೆ ಸಂಬಂಧಿಸಿದಂತೆ ಅಗಸ್ಟ 7 ರಂದು ಜರುಗುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಗಮವಾಗಿ ಜರುಗಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕೆ.ಪಿ.ಟಿ.ಸಿ.ಎಲ್ ಕಿರಿಯ ಸಹಾಯಕ ಹುದ್ದೆಗೆ ಜರುಗುವ ಸ್ಪರ್ಧಾತ್ಮಕ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅ.7 ರಂದು ಜರುಗಲಿರುವ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಗದಗ-ಬೆಟಗೇರಿ ವ್ಯಾಪ್ತಿಯಲ್ಲಿನ 21 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು ಈ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವುದೆ ಲೋಪವಾಗದಂತೆ ಸುಗಮವಾಗಿ ಜರುಗಿಸಲು ಅಗತ್ಯದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ತಿಳಿಸಿದರು. ಈಗಾಗಲೇ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ವ್ಯಾಪ್ತಿಯಲ್ಲಿನ ಎಲ್ಲ ಝರಾಕ್ಸ ಹಾಗೂ ಬುಕ್‍ಸ್ಟಾಲಗಳನ್ನು ಮುಚ್ಚಲು ಹಾಗೂ ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆಯನ್ನು ಹೊರಡಿಸಲಾಗಿರುತ್ತದೆ. ಸುಗಮ ಪರೀಕ್ಷೆಗಳಿಗಾಗಿ ವೀಕ್ಷಕರನ್ನು, ಮಾರ್ಗಾಧಿಕಾರಿ ಹಾಗೂ ತ್ರಿ ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು ಸ್ಪರ್ಧಾತ್ಮಕ ಪರೀಕ್ಷೆಗಾಗಿ ನಿಯೋಜಿಸಲಾದ ಅಧಿಕಾರಿಗಳು ಯಾವುದೆ ಲೋಪಗಳಿಗೆ ಆಸ್ಪದ ನೀಡದೆ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಪೆÇೀನ್ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದ್ದು ಅಭ್ಯರ್ಥಿ ಹಾಗೂ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿ ಸಿಬ್ಬಂದಿಗಳನ್ನು ಹೊರತು ಪಡಿಸಿ ಬೇರೆ ಯಾವುದೇ ವ್ಯಕ್ತಿಗೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶವಿರುವುದಿಲ್ಲ ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ನಿಗಾವಹಿಸಬೇಕು. ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ವಸ್ತ್ರ ಸಂಹಿತೆ ಪಾಲನೆಯಾಗುವಂತೆ ಅಧಿಕಾರಿಗಳು ಗಮನ ಹರಿಸಿ ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ಮೂಲ ಗುರುತಿನ ಚೀಟಿ ಹಾಜರು ಪಡಿಸುವದು ಕಡ್ಡಾಯವಾಗಿದ್ದು ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಲು ತಿಳಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಗಾಗಿ ಗುರುತಿಸಲಾದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ನಿಗದಿತ ಸಮಯಕ್ಕೆ ತಲುಪಿಸಲು ಅಗತ್ಯದ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಾಕಷ್ಟು ಬೆಳಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವದರ ಜೊತೆಗೆ ಪರೀಕ್ಷಾರ್ಥಿಗಳಿಗೆ ಅಗತ್ಯದ ಸೌಲಭ್ಯಗಳನ್ನು ಕಲ್ಪಿಸುವಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಸೂಚಿಸಿದ ಅವರು ಪರೀಕ್ಷೆಗಾಗಿ ನಿಯೋಜಿಸಲಾದ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರುಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವದರ ಮೂಲಕ ಸದರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಗಮವಾಗಿ ಜರುಗಿಸಲು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ತಿಳಿಸಿದರು.