
ದಾವಣಗೆರೆ.ಮಾ.೧೫: ಕರ್ನಾಟಕ ಸುಗಮ ಸಂಗೀತ ಪರಿಷತ್‌ನ ಕೇಂದ್ರ ಸಮಿತಿಯು ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಸರ್ವ ಸದಸ್ಯರ ಮಹಾಸಭೆಯಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್‌ನ ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ಸಾಲಿಗ್ರಾಮ ಗಣೇಶ್ ಶೆಣೈಯವರನ್ನು ಸರ್ವಾನುಮತದಿಂದ ಅವಿರೋಧವಾಗಿ ಪುನರಾಯ್ಕೆ ಮಾಡಲಾಯಿತು ಎಂದು ಪರಿಷತ್ತಿನ ರಾಜ್ಯ ಪ್ರಧಾನ ಕಾರ್ಯದರ್ಶಿ ನಗರ ಶ್ರೀನಿವಾಸ ಉಡುಪ ತಿಳಿಸಿದ್ದಾರೆ.ಪರಿಷತ್ತಿನ ರಾಜ್ಯಾಧ್ಯಕ್ಷರಾದ ವೈ.ಕೆ.ಮುದ್ದುಕೃಷ್ಣರವರ ಅಧ್ಯಕ್ಷತೆಯಲ್ಲಿ ನಡೆದ ಈ ಮಹತ್ವಪೂರ್ಣ ಮಹಾಸಭೆಯಲ್ಲಿ ಪರಿಷತ್ತಿನ ಕಾರ್ಯಾಧ್ಯಕ್ಷರಾದ ಡಾ. ಕಿಕ್ಕೇರಿ ಕೃಷ್ಣಮೂರ್ತಿ, ಸಮಿತಿ ಸದಸ್ಯರಾದ ಅಂತರಾಷ್ಟಿçÃಯ ಖ್ಯಾತ ಹಿರಿಯ ಗಾಯಕರಾದ ಪುತ್ತೂರು ನರಸಿಂಹ ನಾಯಕ್, ಡಾ.ಹೆಚ್.ಎಸ್.ವೆಂಕಟೇಶ ಮೂರ್ತಿ, ಬಿ.ವಿ.ಶ್ರೀನಿವಾಸ್, ಬಿ.ಆರ್.ಲಕ್ಷö್ಮಣ್‌ರಾವ್, ಮಾಲತಿ ಶರ್ಮ, ಡಾ|| ರೋಹಿಣಿ ಮೋಹನ್, ಡುಂಡಿರಾಜ್, ಡಾ|| ನಾ. ದಾಮೋದರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.ಕರ್ನಾಟಕ ಸುಗಮ ಸಂಗೀತ ಪರಿಷತ್‌ನ ರಾಜ್ಯ ಸಮಿತಿ ಹಾಗೂ ದಾವಣಗೆರೆ ಜಿಲ್ಲಾ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರು ಶೆಣೈಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ