
ನವದೆಹಲಿ,ಮೇ೨೨- ದೆಹಲಿ ಸರ್ಕಾರದ ಅಧಿಕಾರಿಗಳ ವರ್ಗಾವಣೆಯ ಅಧಿಕಾರವನ್ನು ತಮ್ಮ ಬಳಿಯೇ ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆ ವಿರೋಧಿಸುವಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರಮುಖ ವಿರೋಧ ಪಕ್ಷಗಳಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಶಿವಸೇನೆ ಉದ್ದವ್ ಠಾಕ್ರೆ ಬಣ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಸೇರಿದಂತೆ ಅನೇಕ ನಾಯಕರನ್ನು ಒತ್ತಾಯಿಸಿದ್ದಾರೆ.
ಅಧಿಕಾರಿಗಳ ವರ್ಗಾವಣೆಯ ಅಧಿಕಾರವನ್ನು ಇತ್ತೀಚೆಗೆ ಸುಪ್ರೀಂಕೋರ್ಟ್ ದೆಹಲಿ ಸರ್ಕಾರಕ್ಕೆ ನೀಡುವ ತೀರ್ಪು ನೀಡಿದ್ದರೂ ಅದನ್ನು ಹಿಂದಕ್ಕೆ ಹಾಕಲು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.
ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆ ವಿರೋಧಿಸುವಂತೆ ವೈಎಸ್‌ಆರ್ ಕಾಂಗ್ರೆಸ್ ಮತ್ತು ಬಿಜೆಡಿ,ಜೆಡಿಯು, ಎನ್‌ಸಿಪಿ, ಶಿವಸೇನೆ ಸೇರಿದಂತೆ ಇನ್ನಿತರೆ ಪಕ್ಷಗಳಿಗೆ ಮನವಿ ಮಾಡಿದ್ದಾರೆ.
ಎನ್‌ಡಿಎ ಪ್ರಸ್ತುತ ಸದನದಲ್ಲಿ ೧೧೦ ಬಲವನ್ನು ಹೊಂದಿದೆ ಮತ್ತು ನಾಮನಿರ್ದೇಶಿತ ಸದಸ್ಯರ ಎರಡು ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಮೂಲಕ ಇನ್ನೂ ಸದಸ್ಯ ಬಲವನ್ನು ಹೆಚ್ಚು ಮಾಡಿಕೊಳ್ಳಬಹುದು,
೨೩೮ ಸದಸ್ಯ ಬಲದಲ್ಲಿ ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನೂ ಎಂಟು ಸದಸ್ಯ ಸ್ಥಾನ ಕೊರತೆಯಿದೆ. ಹೀಗಾಗಿ ವೈಎಸ್‌ಆರ್ ಕಾಂಗ್ರೆಸ್ ಮತ್ತು ಬಿಜೆಡಿ ಅವರ ನಾಯಕರಾದ ಆಂಧ್ರ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಬೆಂಬಲದೊಂದಿಗೆ ಕೊರತೆ ತುಂಬಲು ಪಕ್ಷ ಮುಂದಾಗಿರುವ ನಡುವೆಯೇ ಸುಘ್ರೀವಾಜ್ಞೆಗೆ ವಿರೋಧ ವ್ಯಕ್ತಪಡಿಸುವಂತೆ ಮನವಿ ಮಾಡಿದ್ದರೆ.
ಸುಗ್ರೀವಾಜ್ಞೆ ದೆಹಲಿಯ ಜನರ ಹಿತಾಸಕ್ತಿಯಾಗಿದೆ. ಸಂವಿಧಾನದ ಆದೇಶದ ಪ್ರಕಾರ ಇದನ್ನು ಪ್ರಕಟಿಸಲಾಗಿದೆ” ಎಂದು ಬಿಜೆಪಿಯ ಮುಖ್ಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಅನಿಲ್ ಬಲುನಿ ಹೇಳಿದ್ದಾರೆ.
ಎನ್‌ಡಿಎಯಿಂದ ಎರಡನೇ ಬಾರಿಗೆ ಹೊರಬಂದ ನಂತರ ಜೆಡಿಯು ನಾಯಕ ವಿಪಕ್ಷಗಳ ಒಗ್ಗಟ್ಟಿನ ಪ್ರಯತ್ನಗಳಿಗೆ ಆಸರೆಯಾಗುತ್ತಿರುವುದರಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇತ್ತೀಚೆಗೆ ಬಿಜೆಪಿಯೇತರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಂಘಟನೆಗೆ ಮುಂದಾಗಿದ್ಧಾರೆ.