ಸುಟ್ಟು ಕರಕಲಾದ ಕಾರಿನಲ್ಲಿ ವ್ಯಕ್ತಿ ಶವ ಪತ್ತೆ

ಬೆಂಗಳೂರು,ಮಾ.೨೯- ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್ ಬಳಿಯಲ್ಲಿ ಸುಟ್ಟು ಕರಕಲಾದ ಕಾರಿನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಭದ್ರಪ್ಪ ಲೇಔಟ್‌ನಲ್ಲಿ ಇಂದು ಬೆಳಿಗ್ಗೆ ಸುಟ್ಟು ಕರಕಲಾಗಿರುವ ಕಾರೊಂದನ್ನು ಸ್ಥಳೀಯರು ದೂರದಿಂದ ಗಮನಿಸಿದ್ದಾರೆ . ಹತ್ತಿರ ಹೋಗಿ ನೋಡಿದಾಗ ಕಾರ್‌ನಲ್ಲಿ ವ್ಯಕ್ತಿಯ ಶವ ಇರುವುದು ಕಂಡುಬಂದಿದೆ.ಕೂಡಲೇ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು,ತಕ್ಷಣವೇ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದಾಗ ಕಾರ್‌ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ ಈ ಸಂಬಂಧ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.