ಸುತ್ತೂರು ಮಠಕ್ಕೆ ಸುನೀಲ್ ಬೋಸ್ ಭೇಟಿ

ಸಂಜೆವಾಣಿ ನ್ಯೂಸ್
ಮೈಸೂರು: ಏ.01:- ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಸುತ್ತೂರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಬಿ.ಜೆ.ವಿಜಯಕುಮಾರ್, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮರಿಸ್ವಾಮಿ, ಶಾಸಕರಾದ ಗಣೇಶ್ ಪ್ರಸಾದ್ ಇತರ ಪ್ರಮುಖರು ಭಾಗವಹಿಸಿದ್ದರು.