ಸುಧಾಕರ್ ಗೆ ದೈಹಿಕ ಶಿಕ್ಷಕ ಪ್ರಶಸ್ತಿ ಪ್ರದಾನ

ಕೋಲಾರ,ಸೆ,೭-ಭಾರತ ಸೇವಾದಳ ಜಿಲ್ಲಾ ಸಮಿತಿಯು ಪ್ರತಿ ವರ್ಷ ಕೊಡ ಮಾಡುವ ಅತ್ಯುತ್ತಮ ಸೇವಾದಳ ಶಿಕ್ಷಕ ಪ್ರಶಸ್ತಿಯನ್ನು ಶಿಕ್ಷಕರ ದಿನಾಚರಣೆ ವೇದಿಕೆಯಲ್ಲಿ ಮಾಲೂರು ದೈಹಿಕ ಶಿಕ್ಷಕ ಸುಧಾಕರ್‌ರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.
ದೈಹಿಕ ಶಿಕ್ಷಕ ಸುಧಾಕರ್ ಮಾಲೂರು ತಾಲೂಕಿನಾದ್ಯಂತ ಸೇವಾದಳ ಚಟುವಟಿಕೆಗಳನ್ನು ವಿಸ್ತರಿಸಲು, ಸೇವಾದಳ ಮಿಲಾಪ್ ಶಿಬಿರ, ನಾಯಕತ್ವ ತರಬೇತಿ ಶಿಬಿರ, ಬ್ಯಾಂಡ್ ಸೆಟ್ ತರಬೇತಿ ಶಿಬಿರ ಸೇರಿದಂತೆ ಹಲವಾರು ಚಟುವಟಿಕೆಗಳನ್ನು ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇವರ ಸೇವೆಯನ್ನು ಗಮನಿಸಿ ಸೇವಾದಳ ಜಿಲ್ಲಾ ಸಮಿತಿಯು ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತ್ತು.
ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ವೇದಿಕೆಯಲ್ಲಿ ಡಿಡಿಪಿಐ ಕೃಷ್ಣಮೂರ್ತಿ, ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಭಾರತ ಸೇವಾದಳ ಗೌರವಾಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಮತ್ತು ಕಾರ್ಯದರ್ಶಿ ಎಸ್.ಸುಧಾಕರ್ ಮತ್ತು ಪದಾಧಿಕಾರಿಗಳು ರಾಧಾಕೃಷ್ಣರ ಜೀವನ ಚರಿತ್ರೆ ಪುಸ್ತಕವನ್ನು ಕಾರ್ಯಕ್ರಮದಲ್ಲಿ ಹಾಜರಿದ್ದ ಪ್ರತಿಯೊಬ್ಬ ಶಿಕ್ಷಕರಿಗೂ ಉಚಿತವಾಗಿ ವಿತರಿಸಿದರು.
ಈ ಸಂದರ್ಭದಲ್ಲಿ ಸೇವಾದಳ ಜಿಲ್ಲಾ ಮತ್ತು ತಾಲೂಕು ಸಮಿತಿ ಪದಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಽಕಾರಿಗಳು ಹಾಜರಿದ್ದರು.