
ಸಂಜೆವಾಣಿ ವಾರ್ತೆ
ಮೊಳಕಾಲ್ಮೂರು,ಆ.5: ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಜಿ. ಪ್ರಕಾಶ್ ಮಾತನಾಡಿ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಮುಖಂಡರಾದ ರಾಹುಲ್ ಗಾಂಧಿಯವರ ವಿರುದ್ಧ ಮಾಡಿದ ಮಾನನಷ್ಟ ಮೊಕದ್ದಮೆ ಹಿನ್ನೆಲೆ, ಗುಜರಾತ್ ಹೈಕೋರ್ಟ್ ನ್ಯಾಯಲಯವು ರಾಹುಲ್ ಗಾಂಧಿಯವರ ಲೋಕ ಸಭಾ ಸದಸ್ಯತ್ವವನ್ನು ರದ್ದು ಗೊಳಿಸುವ ಆದೇಶವನ್ನು ನೀಡಿತ್ತು, ಈ ಆದೇಶವನ್ನು ವಜಾ ಗೊಳಿಸುವಂತೆ ದೆಹಲಿ ಸುಪ್ರೀಂಕೋರ್ಟ್ ಗೆ ಮನವಿ ಪತ್ರ ಸಲ್ಲಿಸಲಾಗಿದ್ದು ಇದನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡು ಗುಜರಾತ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಮಧ್ಯಾಂತರ ತಡೆಯಾಜ್ಞೆ ನೀಡಿದ್ದರಿಂದ ದೇಶದ ಕಾಂಗ್ರೆಸ್ ಮುಖಂಡರಲ್ಲಿ ಕಾರ್ಯಕರ್ತರ ಸಂತಸ ತಂದಿದೆ ಎಂದು ತಿಳಿಸಿದರು. ಇದರ ಫಲವಾಗಿ ಇಂದು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಎಸ್. ಖಾದರ್, ಎಂ. ಅಬ್ದುಲ್ಲಾ, ಮಾಜಿ ಪ ಪಂ ಮಾಜಿ ಅಧ್ಯಕ್ಷ ಜಿ. ಪ್ರಕಾಶ್ ಹಾಗೂ ಮುಖಂಡರಾದ ಬಡೋಬಯ್ಯ,ನಾಗರಾಜ್ ಕಟ್ಟೆ, ಸೂರವ್ವನಹಳ್ಳಿ ನಾಗರಾಜ್, ಅಪ್ಪಿ ಮಲ್ಲಿಕಾರ್ಜುನ, ಕಲಿಂವುಲ್ಲಾ, ಗೋಪಾಲ, ಯಜೇನಹಳ್ಳಿ ನಾಗರಾಜ್, ಟೈಲರ್ ಬಸವರಾಜ, ಟೈಲರ್ ಶಿವಣ್ಣ ಇನ್ನು ಮುಂತಾವರಿದ್ದರು.
One attachment • Scanned by Gmail