ಸುಪ್ರೀಂನಲ್ಲಿ ಲವ್ ಜಿಹಾದ್ ವಿಚಾರಣೆ

ನವದೆಹಲಿ, ಜ.೬- ವಿವಾದಾತ್ಮಕ ಲವ್ ಜಿಹಾದ್ ತಡೆ ಕಾನೂನಿಗೆ ಸಂವಿಧಾನಾತ್ಮಕ ಸ್ಥಾನಮಾನ ನೀಡಿರುವ ಕ್ರಮ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಇಂದು ಸಮ್ಮತಿ ಸೂಚಿಸಿದೆ.
ಈ ಸಂಬಂಧ ಉತ್ತರ ಪ್ರದೇಶ, ಉತ್ತರಾಖಂಡ್ ಮತ್ತು ರಾಜ್ಯ ಸರ್ಕಾರಗಳಿಗೆ ನೋಟೀಸ್ ಜಾರಿ ಮಾಡಿ ಮುಂದಿನ ನಾಲ್ಕು ವಾರಗಳ ಒಳಗಾಗಿ ಉತ್ತರ ನೀಡುವಂತೆ ಸೂಚನೆ ನೀಡಿದೆ.
ಈ ಕಾನೂನಿಗೆ ತಡೆ ನೀಡಲು ಕೂಡ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಇತ್ತೀಚೆಗಷ್ಟೇ ಉತ್ತರ ಪ್ರದೇಶ ಸರ್ಕಾರ ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯ ಸರ್ಕಾರಗಳು ವಿವಾದಾತ್ಮಕ ಕಾನೂನು ಜಾರಿ ಮಾಡಿದ್ದವು.
ಲವ್ ಜಿಹಾದ್ ಗೆ ಕಾನೂನಾತ್ಮಕ ಸ್ಥಾನಮಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌ನ
ಮುಖ್ಯ ನ್ಯಾಯಮೂರ್ತಿ ಎಸ್. ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ಈ ಸಂಬಂಧ ಅರ್ಜಿಗಳ ಪರಿಶೀಲಿಸಲು ಸಮ್ಮತಿ ನೀಡಿದೆ.

ಸಂವಿಧಾನದಲ್ಲಿ ಎಲ್ಲರೂ ಸಮಾನರು ಮತ್ತು ಅಸಮಾನತೆಗೆ ಅವಕಾಶ ಇಲ್ಲ ಜಾತ್ಯಾತೀತತೆಯನ್ನು ಉಲ್ಲಂಘಿಸಿರುವ ಕುರಿತು ಹಾಗೂ ಕಾನೂನಿನ ಬಗ್ಗೆ ಪರಿಶೀಲನೆ ನಡೆಸಲು ನ್ಯಾಯಪೀಠ ಹೇಳಿದೆ.

ಲವ್ ಜಿಹಾದ್ ತಡೆ ಕಾಯ್ದೆಯನ್ನು ಜಾರಿಗೆ ತರಲು ಮಧ್ಯಪ್ರದೇಶ ಮತ್ತು ಹರಿಯಾಣ ಸರ್ಕಾರಗಳು ಮುಂದಾಗಿವೆ ಅದಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರು ಮಾಡಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿಲ್ಲ.

ಅರ್ಜಿದಾರರ ಪರಾವಾಗಿ ಹಿರಿಯ ವಕೀಲ ಸಿ.ಯು. ಸಿಂಗ್ ಸುಪ್ರೀಂಕೋರ್ಟ್ ನಲ್ಲಿ ವಾದ ಮಂಡಿಸಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ವಿವಾದಾತ್ಮಕ ಲವ್ ಜಿಹಾದ್ ಕಾನೂನು ಜಾರಿಗೆ ತರುವ ಮೂಲಕ ಶಾಂತಿಯಿಂದ ತರಲಾಗಿದೆ ಇದರಿಂದ ಸಮಾಜದಲ್ಲಿ ಶಾಂತಿ ಕದಡುವ ಸಾಧ್ಯತೆಗಳಿವೆ ಎಂದು ವಾದ ಮಂಡಿಸಿದ್ದರು.

ಲವ್ ಜಿಹಾದ್ ತಡೆ ಕಾನೂನು ಉಲ್ಲಂಘಿಸುವವರ ವಿರುದ್ಧ ಕನಿಷ್ಠ ೧೦ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಉತ್ತರಪ್ರದೇಶ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಸರ್ಕಾರದಲ್ಲಿ ಜಾರಿಗೆ ತರಲಾಗಿದೆ ನ್ಯಾಯಸಮ್ಮತವಲ್ಲ ಮತ್ತು ಸಂವಿಧಾನಕ್ಕೆ ವಿರುದ್ಧವಾದುದು ಎಂದು ಅವರು ನ್ಯಾಯ ಪೀಠದ ಗಮನಕ್ಕೆ ತಂದಿದ್ದರು.

ಉತ್ತರಪ್ರದೇಶದಲ್ಲಿ ಮೊದಲ ಬಾರಿಗೆ ಲವ್ ಜಿಹಾದ್ ಕಾನೂನನ್ನು ಜಾರಿಗೆ ತರಲಾಗಿತ್ತು. ಅದಾದ ಬಳಿಕ ಬಿಜೆಪಿ ಆಡಳಿತವಿರುವ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಸರ್ಕಾರದಲ್ಲಿ ಕಾನೂನು ಜಾರಿಗೆ ತರಲಾಗಿತ್ತು.

ಈ ರಾಜ್ಯಗಳ ಬಳಿಕ ಮಧ್ಯಪ್ರದೇಶದಲ್ಲೂ ಕಾನೂನು ಜಾರಿಗೆ ತರಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರ ಸಚಿವ ಸಂಪುಟದಲ್ಲಿ ಸಮ್ಮತಿ ನೀಡಿದೆ.

ಮದುವೆಗಾಗಿ ಮತಾಂತರ ನಿಷೇದಿಸುವ ಕಾಯ್ದೆ ಇದಾಗಿದೆ. ಈ ಕಾನೂನು ಉಲ್ಲಂಘಿಸುವವರಿಗೆ ಕನಿಷ್ಠ ಒಂದು ಲಕ್ಷ ರೂಪಾಯಿವರೆಗೆ ದಂಡ ಹಾಗೂ ೧೦ ವರ್ಷದ ವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶ ವಿಧಿಸಲಾಗಿದೆ

ವಿವಾದಾತ್ಮಕ ಲವ್ ಜಿಹಾದ್ ತಡೆ ಕಾನೂನು ಪರಿಶೀಲನೆಗೆ ಸುಪ್ರೀಂ ಸಮ್ಮತಿ

ಕಾನೂನು ಪರಿಶೀಲಿಸಲು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಲು ಒಪ್ಪಿಗೆ

ಮುಖ್ಯ ನ್ಯಾಯಮೂರ್ತಿ ಎಸ್.ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ಸಮ್ಮತಿ

ಉತ್ತರ ಪ್ರದೇಶ ಮತ್ತು ಉತ್ತರ ಖಾಂಡ ಸರ್ಕಾರಕ್ಕೆ ನೋಟಿಸ್

ನಾಲ್ಕು ವಾರಗಳಲ್ಲಿ ಉತ್ತರ ನೀಡಲು ಸೂಚನೆ

ರಿಯಾಣ,ಮದ್ಯ ಪ್ರದೃಶದಲ್ಲಿ ಇದೇ ರೀತಿ ಕಾನೂನಿಗೆ ಸಿದ್ಧತೆ

ತಡೆಯಾಜ್ಞೆ ನೀಡುವಂತೆ ಅರ್ಜಿದಾರರ ಮನವಿ

ರಾಜ್ಯಗಳಿಂದ ಉತ್ತರ ಬಂದ ನಂತರ ಮುಂದಿನ ನಿರ್ಧಾರಕ್ಕೆ ಒಲವು