ಸುಭೋದ್ ಕುಮಾರ್ ನೂತನ ಸಿಬಿಐ ನಿರ್ದೇಶಕ


ನವದೆಹಲಿ,ಮೇ ೨೬- ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ನೂತನ ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್.ವಿ ರಮಣ ಮತ್ತು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿದ್ದ ಸಭೆಯಲ್ಲಿ ವಿಸ್ತೃತ ಸಮಾಲೋಚನೆ ನಡೆಸಿ ಸುಭೋದ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.
ಪ್ರಸ್ತುತ ಅವರು ಕೇಂದ್ರ ಕೈಗಾರಿಕಾ ಭದ್ರತಾಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು, ೧೯೮೫ನೇ ಬ್ಯಾಚ್‌ನ ಮಹಾರಾಷ್ಟ್ರದ ಖೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ಇವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ಈ ಹುದ್ದೆಗೆ ಎಸ್‌ಎಸ್‌ಬಿ ಮುಖ್ಯಸ್ಥ ಕುಮಾರ್‌ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿ.ಎಸ್.ಕೆ ಕೌಮುದಿ ಅವರ ಹೆಸರುಗಳು ಚರ್ಚೆಯಲ್ಲಿತ್ತು. ಅಂತಿಮವಾಗಿ ಜೈಸ್ವಾಲ್ ಅವರನ್ನು ನೇಮಕ ಮಾಡಲು ನಿರ್ಧಾರ ಕೈಗೊಳ್ಳಲಾಯಿತು.
ಮುಂದಿನ ೨ ವರ್ಷಗಳ ಅವಧಿಗೆ ಸುಬೋಧ್ ಕುಮಾರ್ ಸಿಬಿಐ ನಿರ್ದೇಶಕರಾಗಿ ಮುಂದುವರೆಯಲಿದ್ದಾರೆ. ಸುಭೋದ್ ಕುಮಾರ್ ಅವರ ಹೆಸರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಮಣ ಪ್ರಸ್ತಾಪಿಸಿದರೆ ಇದಕ್ಕೆ ಪ್ರಧಾನಿ ನರೇಂದ್ರಮೋದಿ ಮತ್ತು ಅಧಿರಂಜನ್ ಚೌದ್ರಿ ಒಪ್ಪಿಗೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.