ಸುರಂಗಗಳಿಗೆ ಸಮುದ್ರದ ನೀರು

ಟೆಲ್ ಅವೀವ್,ಡಿ.೧೩-ಇಸ್ರೇಲ್ ಸೇನೆಯು ಗಾಜಾದಲ್ಲಿ ಅಡಗಿಕೊಳ್ಳಲು ಹಮಾಸ್ ಉಗ್ರರು ಬಳಸುತ್ತಿದ್ದ ಸುರಂಗಗಳಿಗೆ ಸಮುದ್ರದ ನೀರನ್ನು ಬಿಡಲು ಆರಂಭಿಸಿದೆ ಎಂದು ವರದಿಯಾಗಿದೆ.
ಹಮಾಸ್ ಉಗ್ರಗಾಮಿಗಳು ಒತ್ತೆಯಾಳುಗಳು ಮತ್ತು ಯುದ್ಧ ಸಾಮಗ್ರಿಗಳನ್ನು ಮರೆಮಾಡಲು ಮಾತ್ರವಲ್ಲದೆ ತಮ್ಮನ್ನು ಮರೆಮಾಡಲು ಸಹ ಬಳಸುತ್ತಾರೆ ಎಂದು ನಂಬಲಾದ ಈ ಸುರಂಗಗಳನ್ನು ನಾಶಮಾಡಲು ಸಮುದ್ರದ ನೀರನ್ನು ಹರಿಸಲಾಗುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡನ್ ಅವರ ಆಡಳಿತದ ಕೆಲವು ಅಧಿಕಾರಿಗಳು ಹೇಳಿದ್ದಾರೆಂದು ವರದಿಯಾಗಿದೆ.ಸಮುದ್ರದ ನೀರು ಹರಿಸುವುದರಿಂದ ಶುದ್ಧ ಕುಡಿಯುವ ನೀರು ಪೂರೈಕೆಗೆ ಧಕ್ಕೆ ಉಂಟಾಗಲಿದೆ ಎಂದು ಇತರ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ವರದಿಗೆ ಇಸ್ರೇಲ್ ಸೇನೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ