ಸುರಕ್ಷತೆಯೊಂದಿಗೆ ಕಾರ್ಯನಿರ್ವಹಿಸಿದರೆ ತೊಂದರೆಯಾಗದು

ಕಲಬುರಗಿ: ಮಾ.5:ಬೆಂಕಿ ಅವಘಡಗಳು, ಪ್ರವಾಹ, ಸಾಂಕ್ರಾಮಿಕ ರೋಗಗಳಿಂದ ಸಂರಕ್ಷಿಸುವುದು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕ ವರ್ಗಕ್ಕೆ ಸುರಕ್ಷತೆ ದೊರೆಯಬೇಕು. ಆಹಾರದಲ್ಲಿ ಯಾವುದೇ ರೀತಿಯ ಕಲಬೆರಕೆ ಇಲ್ಲದಂತೆ ಸುರಕ್ಷತೆ ಇರಬೇಕು. ವಾಹನ ಚಲಾವಣೆ ಮಾಡುವಾಗ ಸಾರಿಗೆ ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷತೆ ಕಾಪಾಡಬೇಕು. ಆರೋಗ್ಯ ಸಂರಕ್ಷಣೆ ಮಾಡುವುದು ಸೇರಿದಂತೆ ಮುಂತಾದ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಿದರೆ ತೊಂದರೆಯಾಗುವುದಿಲ್ಲ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.

    ನಗರದ ರಾಮನಗರದಲ್ಲಿರುವ 'ಕೊಹಿನೂರ ಕಂಪ್ಯೂಟರ ತರಬೇತಿ ಕೇಂದ್ರ'ದಲ್ಲಿ 'ಬಸವೇಶ್ವರ ಸಮಾಜ ಸೇವಾ ಬಳಗ'ದ ವತಿಯಿಂದ 'ರಾಷ್ಟ್ರೀಯ ಸುರಕ್ಷತಾ ದಿನಾಚರಣೆ'ಯ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
   ಇಂದಿನ ಒತ್ತಡದ ಬದುಕಿನಲ್ಲಿ ಜೀವದ ಕಡೆ ಲಕ್ಷ್ಯ ವಹಿಸದಷ್ಟು ಬಿಡುವಿಲ್ಲದಾಗಿದೆ. ಯಾವುದೇ ಕೆಲಸ ಮಾಡಿದರೂ ಅದರಿಂದ ನಮಗೆ ಸುರಕ್ಷತೆ ಒದಗಿಸುವುದರ ಜೊತೆಗೆ ಸಮಾಜಕ್ಕೆ ಹಿತವಾಗಿರಬೇಕು. ಆದ್ದರಿಂದ ಪ್ರತಿಯೊಬ್ಬರೂ ಸುರಕ್ಷತೆಯ ಜೊತೆಗೆ ಕಾರ್ಯ ಮಾಡುವುದು ಅಗತ್ಯವಾಗಿದೆ. ದೇಶಕ್ಕೆ ಸೂಕ್ತ ಭದ್ರತೆಯಿಂದ ಸುರಕ್ಷತೆ ಸಾಧ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ.ಸತೀಶ್ ಟಿ.ಸಣಮನಿ, ಪ್ರಾಚಾರ್ಯ ಭೀಮಾಶಂಕರ ಘತ್ತರಗಿ, ಉಪನ್ಯಾಸಕ ವಿಶ್ವನಾಥ ಶೇಗಜಿ, ಕಸಾಪ ಉತ್ತರ ವಲಯ ಗೌರವ ಅಧ್ಯಕ್ಷ ಶಿವಯೋಗಪ್ಪ ಬಿರಾದಾರ ಸೇರಿದಂತೆ ಮತ್ತಿತರರಿದ್ದರು.