ಸುರಪುರ ಬಸ್ ನಿಲ್ದಾಣಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತಾಯಿಸಿ ಪ್ರತಿಭಟನೆ

(ಸಂಜೆವಾಣಿ ವಾರ್ತೆ)
ಸುರಪುರ:ನ.24: ನಗರದ ಬಸ ನಿಲ್ದಾಣಕ್ಕೆ ಮೂಲಭೂತ ಸೌಕರ್ಯ ಒದಗಿಸಬೇಕು ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಮನವಿಯನ್ನು ಸಲ್ಲಿಸಲಾಯಿತು.
ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಮುಖಂಡರುಗಳು ನಗರದ ಬಸ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಸಮಯಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ, ಪೆÇಲೀಸ್ ಬಂದೋಬಸ್ತ ವ್ಯವಸ್ಥೆಗಳನ್ನು ಕಲ್ಪಿಸಬೇಕು, ಹುಣಗಸಿ ಬಸ್ ಡಿಪೆÇೀ ಮಂಜೂರಾಗಿ ಎರಡು ವರ್ಷ ಕಳೆದರು ಕಾಮಗಾರಿ ಪ್ರಾರಂಭವಾಗಿಲ್ಲ ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು, ಜೊತೆಗೆ ಗ್ರಾಮೀಣ ಭಾಗಕ್ಕೆ ರಾತ್ರಿ ಸಮಯದಲ್ಲಿ ಬಸ್ಸ ಸಂಚಾರ ಇಲ್ಲದಿರುವುದರಿಂದ ಗ್ರಾಮೀಣ ಭಾಗದ ಜನತೆಗೆ ತೊಂದರೆಯಾಗುತ್ತಿದ್ದು ಬಸ್ಸಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಮನವಿಯನ್ನು ಸುರಪುರ ಘಟಕ ವ್ಯವಸ್ಥಾಪಕರ ಮೂಲಕ ಸಲ್ಲಿಸಲಾಯಿತು.
ಸಂದರ್ಭದಲ್ಲಿ ವೆಂಕೋಬ ದೊರೆ, ನಾಗಣ್ಣ ಕಲ್ಲದೇವನಹಳ್ಳಿ, ಮಲ್ಲಣ್ಣ ಕಮತಗಿ, ಭೀಮರಾಯ ಸಿಂದಗೇರಿ, ಗಂಗಾಧರ ನಾಯಕ ತಿಂಥಣಿ, ನಿಂಗಣ್ಣ ದೇವರಗೋನಾಲ, ಗೋಪಾಲ ಬಾಗಲಕೋಟ, ರಾಜು ದರಭಾರಿ, ಶಿವಶಂಕರ ಹೊಸಮನಿ ಸೇರಿದಂತೆ ಅನೇಕರಿದ್ದರು.